ಕಡಬ ಟೈಮ್: ಯುವತಿಯೋರ್ವಳ
ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಉಡುಪಿ ಜಿಲ್ಲೆಯ ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಕೇಳಿ ಬಂದಿದೆ.


ಕುಕ್ಕುಂದೂರು
ಗ್ರಾಮದ 21ರ ವಯಸ್ಸಿನ ಯುವತಿಗೆ
ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯ ವೇಳೆ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.


ಆಸ್ಪತ್ರೆ
ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಪ್ರಕರಣ ಸಂಬಂಧ ಅನ್ಯ ಧರ್ಮದ ವ್ಯಕ್ತಿಯೊಬ್ಬನನ್ನು ಪೊಲೀಸರು
ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


ಸಂತ್ರಸ್ತೆ
ಯುವತಿ ಕುಕ್ಕುಂದೂರಿನ ಅಯ್ಯಪ್ಪ ನಗರದ ನಿವಾಸಿ. ಮನೆಯ ಪಕ್ಕದ ರಂಗನಪಲ್ಕೆ ಎಂಬ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ.
ಬಜರಂಗದಳ
ರಾಜ್ಯ ಸಂಚಾಲಕ ಸುನಿಲ್ ಕೆ.ಆರ್. ಅವರು
ಘಟನೆಯನ್ನು ಖಂಡಿಸಿದ್ದು ನಾಳೆಯೊಳಗೆ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದಲ್ಲಿ ಠಾಣೆಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬೋವಿ ಸಮುದಾಯದವರು ಕೂಡ ಘಟನೆಯನ್ನು ಖಂಡಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.


ಆರೋಪಿಗಳ
ಪೈಕಿ ಓರ್ವನು ಯುವತಿಗೆ ಪರಿಚಿತನಾಗಿದ್ದಾನೆ ಎಂದು ತಿಳಿದುಬಂದಿದೆ. ಈತನೇ ಈಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಮತ್ತಿಬ್ಬರನ್ನು ಕರೆಸಿಕೊಂಡಿದ್ದ ಎಂದು ಹೇಳಲಾಗುತ್ತಿದೆ.