33.3 C
Kadaba
Saturday, March 15, 2025

ಹೊಸ ಸುದ್ದಿಗಳು

Rubber Tree : ರಬ್ಬರ್ ಬೆಲೆಯಲ್ಲಿ ದಾಖಲೆಯ ಏರಿಕೆ – ಬೆಳೆಗಾರರಿಗೆ ಹರ್ಷ

Must read

 ಕಡಬ ಟೈಮ್ಸ್: ರಬ್ಬರ್
ಬೆಲೆ 12 ವರ್ಷಗಳ ನಂತರ ದಾಖಲೆಯ ಗರಿಷ್ಠ ಮಟ್ಟದಲ್ಲಿ ಏರಿಕೆ ಕಂಡಿದೆ. ರಬ್ಬರ್ ಬೋರ್ಡ್ ಕೆಜಿಗೆ 235 ರೂ. ಬೆಲೆ ನಿಗದಿಪಡಿಸಿದೆ.

kadabatimes.in

ಕಾಸರಗೋಡು
ಸೇರಿದಂತೆ ಕೇರಳದ ಬಹುತೇಕ ಪ್ರದೇಶಗಳಲ್ಲಿ 237 ರಿಂದ 241 ರೂ.ಗಳಿಗೆ ಮಾರಾಟವಾಗುತ್ತಿದೆ.
ಕೆಲವು ವ್ಯಾಪಾರಿಗಳು 241 ರೂ.ಗೆ ಮಾರಾಟ
ಮಾಡಿದ್ದಾರೆ. 2011-12ರಲ್ಲಿ ರಬ್ಬರ್ ಶೀಟ್ಗಳ ಬೆಲೆ ಕಿಲೋಗೆ
283 ರೂ. ತಲುಪಿತ್ತು

kadabatimes.in


kadabatimes.in

ಅತಿವೃಷ್ಟಿ
ಹಾಗೂ ಹವಾಮಾನ ವೈಪರೀತ್ಯದಿಂದ ಮಾರುಕಟ್ಟೆಯಲ್ಲಿ ರಬ್ಬರ್ ಕೊರತೆ ಉಂಟಾಗಿದೆ. ಕಳೆದ ಕೆಲವು ದಿನಗಳಿಂದ ಕೆಜಿಗೆ 2 ರಿಂದ 3 ರೂ. ಬೆಲೆ ಏರಿಕೆಯಾಗಿದೆ. ಇದಕ್ಕೆ ಮುಖ್ಯ ಕಾರಣ ಪೂರೈಕೆ ಕೊರತೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಸದ್ಯದ ಪರಿಸ್ಥಿತಿ ಮುಂದುವರಿದರೆ ಒಂದು ವಾರದಲ್ಲಿ ಕಿಲೋಗೆ 250 ರೂ. ತಲುಪಬಹುದು ಎಂದು ಅಂದಾಜಿಸಲಾಗಿದೆ.

kadabatimes.in

 ದೇಶೀಯ
ಮಾರುಕಟ್ಟೆಯಲ್ಲಿ ರಬ್ಬರ್ ಬೆಲೆ ಹೆಚ್ಚಾದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗುವುದು ಸಾಮಾನ್ಯ. ಆದರೆ, ಈಗಿನ ಪರಿಸ್ಥಿತಿ ಭಿನ್ನವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಬ್ಬರ್ ಬೆಲೆಗಳು ಭಾರತದ ರಬ್ಬರ್ ಬೆಲೆಗಿಂತ 50 ರೂ.ನಷ್ಟು ಕಡಿಮೆ
ಇದೆ. ವಿದ್ಯುತ್ ವಾಹನಗಳಿಗೆ ಟೈರ್ ತಯಾರಿಸಲು ಹೆಚ್ಚಾಗಿ ನೈಸರ್ಗಿಕ ರಬ್ಬರ್ ಅನ್ನೇ ಬಳಸಲಾಗುತ್ತಿದೆ. ಇದು ಬೇಡಿಕೆ ಮತ್ತು ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ.