ಕಡಬ ಟೈಮ್ಸ್: ಮಹಿಳೆ
ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್ ಪುತ್ತಿಲ (ಅವರಿಗೆ ಪುತ್ತೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್.ಸಿ ನ್ಯಾಯಾಲಯ ಜಾಮೀನು
ಮಂಜೂರು ಮಾಡಿದೆ.




ಪುತ್ತೂರು
ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಹಿನ್ನಲೆಯಲ್ಲಿ ಕಾನೂನಿಗೆ ಗೌರವ ನೀಡಿ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಅರುಣ್ ಕುಮಾರ್ ಪುತ್ತಿಲ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು.




ವಿಚಾರಣೆ
ನಡೆಸಿದ ನ್ಯಾಯಾಲಯ ಅರುಣ್ ಕುಮಾರ್ ಪುತ್ತಿಲ ಅವರಿಗೆ ಜಾಮೀನು ಮಂಜೂರು ಮಾಡಿದೆ.ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದ್ದು ಮುಂದಿನ ದಿನಗಳಲ್ಲಿ ನನ್ನ ವಿರುದ್ಧ ಬಂದಂತಹ ಆರೋಪಗಳಿಗೆ ಕಾನೂನು ರೀತಿಯ ಹೋರಾಟ ಮಾಡುತ್ತೇನೆ ಎಂದು ಪುತ್ತಿಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.