ಕಡಬ ಟೈಮ್ಸ್, ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಗೊಂಡಿದ್ದು ಸದಸ್ಯತ್ವ ಅಭಿಯಾನದ ಹಾಸನ ಜಿಲ್ಲಾ ಉಸ್ತುವಾರಿಯನ್ನಾಗಿ ಜೆಡಿಎಸ್ ರಾಜ್ಯ ಕಾರ್ಯದರ್ಶಿ ಸಯ್ಯದ್ ಮೀರಾ ಸಾಹೇಬ್ ಕಡಬ ಅವರನ್ನು ನೇಮಕ ಗೊಳಿಸಲಾಗಿದೆ.
ಜೆಡಿಎಸ್ ಅಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಆದೇಶಿಸಿದ್ದಾರೆ.
ಮೀರಾ ಸಾಹೇಬ್ ಅವರು ಈಗಾಗಲೇ ಹಾಸನಕ್ಕೆ ತೆರಳಿದ್ದು ಜಿಲ್ಲೆಯ ವಿವಿಧ ಕಡೆಗಳಲ್ಲಿ ಸದಸ್ಯತ್ವ ಅಭಿಯಾನದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.