![]() ![]() |
ಬಿಜೆಪಿ ಸೇರ್ಪಡೆಗೊಂಡ ಜಯಾನಂದ ಬಂಟ್ರಿಯಾಲ್ ದಂಪತಿ |


ನೆಲ್ಯಾಡಿ:
ನೆಲ್ಯಾಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಸದಸ್ಯ, ಮಾಜಿ ಅಧ್ಯಕ್ಷರೂ ಆಗಿರುವ ಜಯಾನಂದ ಬಂಟ್ರಿಯಾಲ್
ಹಾಗೂ ಅವರ ಪತ್ನಿ ಅವರು ಅ.15ರಂದು ಬಂಟ್ವಾಳದಲ್ಲಿ
ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ
ಸೇರ್ಪಡೆಗೊಂಡಿದ್ದಾರೆ.


ಬಂಟ್ವಾಳದಲ್ಲಿ
ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನ ಸಭೆ ವಿಪಕ್ಷ
ನಾಯಕ ಆರ್ ಅಶೋಕ್, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಮಾಜಿ ಸಂಸದ
ನಳಿನ್ ಕುಮಾರ್ ಕಟೀಲ್, ಸುಳ್ಯ ಶಾಸಕಿ ಭಾಗೀರಥಿ ಹಾಗೂ ಇನ್ನಿತರ ಪ್ರಮುಖ ನಾಯಕರು ಭಾಗವಹಿಸಿದ್ದರು.


ಜಯಾನಂದ
ಬಂಟ್ರಿಯಾಲ್ ಅವರು ನೆಲ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಪ್ರಸ್ತುತ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ, ನೆಲ್ಯಾಡಿ ಜೆಸಿಐ ಪೂರ್ವಾಧ್ಯಕ್ಷರಾಗಿಯೂ, ಪ್ರಸ್ತುತ
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ, ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ನೆಲ್ಯಾಡಿ ಸರಕಾರಿ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದಾರೆ.

