24.5 C
Kadaba
Monday, March 17, 2025

ಹೊಸ ಸುದ್ದಿಗಳು

BIG UPDATE: ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಕುಚ್ಚಲಕ್ಕಿ ದರ ಏರಿಕೆ ಸಾಧ್ಯತೆ

Must read

 

kadabatimes.in
ಕುಚ್ಚಲಕ್ಕಿ:ಸಾಂದರ್ಭಿಕ ಚಿತ್ರ(KADABA TIMES)

kadabatimes.in

ಕಡಬ ಟೈಮ್: ಕರಾವಳಿ ಜಿಲ್ಲೆಗಳಲ್ಲಿ ಹವಮಾನದ ಬದಲಾವಣೆಗಳಿಂದಾಗಿ ಉತ್ಪಾದನೆಯ ಮೇಲೆ ಭಾರೀ ಹೊಡೆತ ಬಿದ್ದಿದೆ. ಹೊರ ರಾಜ್ಯದ ಅಕ್ಕಿ ಅನಿವಾರ್ಯವಾಗುವ ಸ್ಥಿತಿ ಉದ್ಭವಿಸಿದೆ. ಇದರಿಂದ ಸ್ಥಳೀಯ ಕುಚ್ಚಲಕ್ಕಿ ದರ ಏರಿಕೆಯೂ ಉಂಟಾಗಬಹುದು
ಎಂದು ವರದಿಯಾಗಿದೆ.


2023ರ
ಮುಂಗಾರಿನಲ್ಲಿ ಜಿಲ್ಲಾದ್ಯಂತ 38 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆ ಮಾಡಲಾಗಿತ್ತು.
ಸಕಾಲದಲ್ಲಿ ಮಳೆ ಬಾರದೇ ಇದ್ದುದ್ದರಿಂದ ರೈತರು ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಪಡೆದಿರಲಿಲ್ಲ.
ಈ ವರ್ಷ ಮಳೆ ಚೆನ್ನಾಗಿ ಬಂದಿದ್ದರೂ ಬಿತ್ತನೆ 35 ಸಾವಿರ ಹೆಕ್ಟೇರ್‌ ದಾಟಿರಲಿಲ್ಲ. ಕಳೆದ ವರ್ಷಕ್ಕಿಂತ
ಸುಮಾರು 3 ಸಾವಿರ ಹೆ. ಪ್ರದೇಶದಲ್ಲಿ ಬಿತ್ತನೆ ಕಡಿಮೆಯಾಗಿದೆ. ಹಿಂಗಾರಿನಲ್ಲಿ ಕಳೆದ ವರ್ಷ 5000
ಹೆ. ಬಿತ್ತನೆ ಮಾಡಲಾಗಿತ್ತು. ಈ ವರ್ಷ 5179 ಹೆ. ಏರಿಕೆಯಾಗಿದೆ.


kadabatimes.in

ಇಳುವರಿ ಕುಸಿತ : ಮುಂಗಾರು ಮತ್ತು ಹಿಂಗಾರು ಸೇರಿಸಿ ಕಳೆದ
ವರ್ಷ 43 ಸಾವಿರ ಹೆ. ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಈ ವರ್ಷ ಅದು 40191 ಹೆ. ಇಳಿದಿದೆ.
 ಕಳೆದ ವರ್ಷ ಮುಂಗಾರಿನಲ್ಲಿ 1.52 ಲಕ್ಷ ಟನ್‌ ಹಾಗೂ
ಹಿಂಗಾರಿನಲ್ಲಿ 0.2 ಲಕ್ಷ ಟನ್‌ ಭತ್ತದ ಇಳುವರಿ ಪಡೆಯಲಾಗಿತ್ತು. ಈ ವರ್ಷ ಮುಂಗಾರಿನಲ್ಲಿ 1.40 ಲಕ್ಷ
ಟನ್‌ ಹಾಗೂ ಹಿಂಗಾರಿನಲ್ಲಿ 0.21 ಲಕ್ಷ ಮೆಟ್ರಿಕ್‌ ಇಳುವರಿ ಅಂದಾಜಿಸಲಾಗಿದೆ.

 

ಒಟ್ಟಾರೆಯಾಗಿ ಕಳೆದ ವರ್ಷ 1.72 ಲಕ್ಷ ಟನ್‌ ಭತ್ತದ ಉತ್ಪಾದನೆಯಾಗಿತ್ತು.
ಈ ಬಾರಿ 1.61 ಲಕ್ಷ ಟನ್‌ಗೆ ಇಳಿಯುವ ಸಾಧ್ಯತೆಯಿದೆ. ಸುಮಾರು 11 ಲಕ್ಷ ಟನ್‌ ಇಳುವರಿ ಕಡಿಮೆಯಾಗಲಿದೆ
ಎನ್ನುತ್ತದೆ ಕೃಷಿ ಇಲಾಖೆ ಲೆಕ್ಕಾಚಾರ.


ಅಕ್ಕಿ ಉತ್ಪಾದನೆ ಇಳಿಕೆ: ಭತ್ತದ ಒಟ್ಟು ಉತ್ಪಾದನೆಯ ಸರಿ ಸುಮಾರು
ಶೇ.65ರಷ್ಟು ಅಕ್ಕಿಯಾಗಲಿದೆ. ಉಳಿದ ಶೇ.35ರಷ್ಟು ಕಚ್ಚಾ ರೂಪದಲ್ಲಿ ಸಿಗಲಿದ್ದು, ಪಶು ಆಹಾರಕ್ಕೆ
ಹೆಚ್ಚು ಬಳಸಲಾಗುತ್ತದೆ. ಕಳೆದ ವರ್ಷದ ಒಟ್ಟು ಭತ್ತದ ಉತ್ಪಾದನೆಯಲ್ಲಿ 0.98 ಲಕ್ಷ ಟನ್‌ ಅಕ್ಕಿ ಲಭ್ಯವಾಗಿತ್ತು.
ಈ ವರ್ಷದ ಅಂದಾಜಿನಲ್ಲಿ 91 ಲಕ್ಷ ಟನ್‌ ಅಕ್ಕಿ ದೊರೆಯಲಿದೆ. ಅಂದರೆ ಅಕ್ಕಿ ಉತ್ಪಾದನೆಯಲ್ಲೂ ಸರಿ
ಸುಮಾರು 7 ಲಕ್ಷ ಟನ್‌ ಕಡಿಮೆಯಾಗಲಿದೆ.

kadabatimes.in