

![]() ![]() |
ಅರಣ್ಯಾಧಿಕಾರಿ ಸಂಜೀವ ಪೂಜಾರಿ(ಚಿತ್ರ ಕೃಪೆ:FACEBOOK) |


ಬೆಳ್ಳಾರೆ: ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪ ವಲಯ ಅರಣ್ಯಾಧಿಕಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಭಜನೆ ಮಾಡುವ ಮೂಲಕ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. .


ಹಿಂದೂ ಸಂಘಟನೆಯ ಮುಖಂಡರು ಪೊಲೀಸ್ ಠಾಣೆಗೆ ಭೇಟಿ ನೀಡಿ ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಇದೀಗ ಬೆಳ್ಳಾರೆ ಪೊಲೀಸರು ಆರೋಪಿ ಸಂಜೀವ ಪೂಜಾರಿಯವರನ್ನು ಬಂಧಿಸಿದ್ದಾರೆ.

