23.9 C
Kadaba
Friday, March 21, 2025

ಹೊಸ ಸುದ್ದಿಗಳು

ಪಿಲಿಕುಳ ನಿಸರ್ಗಧಾಮದಲ್ಲಿ ಅಗ್ನಿ ಅವಘಡ: ಬೆಂಕಿ ಕೆನ್ನಾಲಿಗೆಗೆ ಎರಡು ಎಲೆಕ್ಟ್ರಿಕ್ ವಾಹನಗಳು ಭಸ್ಮ

Must read

 

kadabatimes.in
ಬೆಂಕಿಗಾಹುತಿಯಾದ ಎಲೆಕ್ಟ್ರಿಲ್ ವಾಹನಗಳು

kadabatimes.in

ಕಡಬ
ಟೈಮ್ :
ಮಂಗಳೂರಿನ  ಪಿಲಿಕುಳ
ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.


ಇಲ್ಲಿನ
ವರ್ಕ್ ಶಾಪ್ ನಲ್ಲಿ ಚಾರ್ಜ್ ಗೆ ಹಾಕಿದ್ದ ಒಂದು
ಎಲೆಕ್ಟ್ರಿಕ್ ವಾಹನದಲ್ಲಿ ಸ್ಪಾರ್ಕ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಒಟ್ಟು ಎರಡು ವಾಹನಗಳು ಸಂಪೂರ್ಣ ಭಸ್ಮವಾಗಿದೆ. ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಬಗ್ಗಿ ಎಲೆಕ್ಟ್ರಿಕ್ ವಾಹನಗಳಿದ್ದವು ಎನ್ನಲಾಗಿದೆ. ಆದರೆ ಅದೃಷ್ಟವಶಾತ್ ಭಾರೀ ದೊಡ್ಡ ಅನಾಹುತ ತಪ್ಪಿದೆ.


kadabatimes.in

ಎರಡು
ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಕದ್ರಿ ಅಗ್ನಿ ಶಾಮಕ ದಳ ಕ್ಲಪ್ತ ಸಮಯಕ್ಕೆ
ಸ್ಥಳಕ್ಕೆ ಆಗಮಿಸಿದ ಹಿನ್ನೆಲೆ  ಪಿಲಿಕುಳದ ಸಿಬ್ಬಂದಿಗಳೇ ಸೇರಿ
ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಅಂತಿಮವಾಗಿ ಅರ್ಧ ಗಂಟೆ  ಕಳೆದು
ಕದ್ರಿ ಅಗ್ನಿ ಶಾಮಕ ದಳ ಬಂದು ಬೆಂಕಿ
ನಂದಿಸಿದೆ


ಘಟನಾ ಸ್ಥಳಕ್ಕೆ ಕಾವೂರು ಠಾಣಾ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


kadabatimes.in