![]() ![]() |
ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ |


ಕಡಬ ಟೈಮ್ಸ್: ವಿಧಾನ
ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್ನ ನೂತನ ಸದಸ್ಯರಾಗಿ
ಪ್ರಮಾಣವಚನ ಸ್ವೀಕರಿಸಿದರು.


ವಿಧಾನಪರಿಷತ್ತಿನ
ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು.


ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನವಪರಿಷತ್ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಸೇರಿದಂತೆ ಶಾಸಕರು, ವಿಧಾನ ಪರಿಷತ್ನ ಸದಸ್ಯರು ಉಪಸ್ಥಿತರಿದ್ದರು.

