33.3 C
Kadaba
Saturday, March 15, 2025

ಹೊಸ ಸುದ್ದಿಗಳು

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ ಹಿನ್ನೆಲೆ: ಮೂರು ದಿನಗಳ ಶೋಕಾಚಾರಣೆ, ನಾಳೆ (ಡಿ.11) ಸರ್ಕಾರಿ ರಜೆ ಘೋಷಣೆ

Must read

 

kadabatimes.in

kadabatimes.in

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ (S.M.Krishna) ಅವರು ಮಂಗಳವಾರ
(ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ.

ಸರ್ಕಾರದ ಆದೇಶ ಪ್ರತಿ

kadabatimes.in

ಎಸ್.ಎಂ.ಕೃಷ್ಣ ನಿಧನದ
ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ. ಎಸ್.ಎಂ.ಕೆ ಅವರ
ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

kadabatimes.in