ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು
ಬೈಕ್ ಸವಾರ ಗಾಯಗೊಂಡ ಘಟನೆ ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ ಮಂಗಳವಾರ ಸಂಜೆ( ಫೆ.4) ನಡೆದಿದೆ.




ಈ
ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ . ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಖಾಸಗಿ ಸಂಸ್ಥೆಯೊಂದರ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅವರು ಎಡಮಂಗಲಕ್ಕೆ ತೆರಳಿ ಈ ರಸ್ತೆಯಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.


ಈ ಘಟನೆ ಬೆನ್ನಲ್ಲೇ ಸಾರ್ವಜನಿಕರು ಒಟ್ಟು ಸೇರಿದ್ದು ಅರಣ್ಯ ಇಲಾಖೆಯ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಪ್ರತಿಭಟನೆಗೆ ಸಜ್ಜಾಗುತ್ತಿರುವುದಾಗಿ ಮಾಹಿತಿ ಲಭಿಸಿದೆ.


ಕಳೆದ
ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ
ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ