22.4 C
Kadaba
Sunday, March 16, 2025

ಹೊಸ ಸುದ್ದಿಗಳು

ಕಡಬದ ಬೆಳಂದೂರಿನ ಮನೆಯಿಂದ ಕಳ್ಳತನ ಪ್ರಕರಣ: ಕಾರು ಸಹಿತ ಇಬ್ಬರನ್ನು ಬಂಧಿಸಿದ ಪೊಲೀಸರು

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, ಕಾಣಿಯೂರು:  ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯಿಂದ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವು ನಡೆಸಿದ ಆರೋಪದಲ್ಲಿ ಇಬ್ಬರು ಆರೋಪಿಗಳ ಸಹಿತ, ಕೃತ್ಯಕ್ಕೆ ಬಳಸಿದ ಕಾರು, ಕಳವಾದ ಸೊತ್ತುಗಳನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

kadabatimes.in

ಕಡಬ ತಾಲೂಕಿನ ಬೆಳಂದೂರಿನ ಮೊಹಮ್ಮದ್ ನಿಜಾರ್(25) ಹಾಗೂ ಬಜ್ಪೆಯ ಅಬ್ದುಲ್ ಮುನೀರ್ (28) ಬಂಧಿತರು.

kadabatimes.in

ಈ ಸುದ್ದಿ ಓದಿ: ದೇವಸ್ಥಾನದ ಧಾರ್ಮಿಕ ವಿಧಾನದಲ್ಲಿ ಬಳಸಿದ ಪವಿತ್ರ ಒಂದು ನಿಂಬೆ ಹಣ್ಣು 13,000 ರೂ.ಗೆ ಹರಾಜು

ಬೆಳಂದೂರು ಗ್ರಾಮದ ಗುಂಡಿನಾರು ಮನೆಯೊಂದರಿಂದ ಕಳವು ನಡೆದಿತ್ತು. ಮನೆಯವರು ರಾತ್ರಿ ಕಾರ್ಯಕ್ರಮಕ್ಕೆಂದು ಹೊರಗೆ ಹೋಗಿದ್ದ ಫೆ.6-ಫೆ.7ರ ನಡುವಿನಲ್ಲಿ ಮನೆಯಲ್ಲಿನ ಮುಂಬಾಗಿಲು ಮುರಿಯಲು ಯತ್ನಿಸಿ, ಬಳಿಕ ಹಿಂಬಾಗಿಲು ಮುರಿದು ಒಳನುಗ್ಗಿದ್ದ ಕಳ್ಳರು ಒಟ್ಟು ರೂ.1.43 ಲಕ್ಷ ಮೌಲ್ಯದ ಚಿನ್ನಭರಣ ಕಳವು ನಡೆಸಿದ್ದರು. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

kadabatimes.in

ಜಿಲ್ಲಾ ಪೊಲೀಸರ ನಿರ್ದೇಶನದಂತೆ ಪುತ್ತೂರು ಉಪವಿಭಾಗ ಡಿವೈಎಸ್‌ಪಿ, ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖೆ ನಡೆಸಿದ ಬೆಳ್ಳಾರೆ ಪೊಲೀಸ್ ಎಸೈ ಈರಯ್ಯ ನೇತೃತ್ವದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿ: ಕಡಬ: ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೊಂಬತ್ತಿ ಹಿಡಿದು, ಭಿತ್ತಿಪತ್ರ  ಪ್ರದರ್ಶನ

kadabatimes.in

ಬಂಧಿತರಿಂದ ಕೃತ್ಯಕ್ಕೆ ಬಳಸಿದ ಕಾರು, ಕಳುವಾದ ವಸ್ತುಗಳನ್ನು ಸ್ವಾಧಿನಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಅಬ್ದುಲ್ ಮುನೀರ್ ಎಂಬಾತನ ವಿರುದ್ಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ 18 ಪ್ರಕರಣಗಳು ಹಾಗೂ ಇನ್ನೊಬ್ಬ ಆರೋಪಿ ಮೊಹಮ್ಮದ್ ನಿಜಾರ್ ಎಂಬಾತನ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿದೆ.