23.5 C
Kadaba
Saturday, March 15, 2025

ಹೊಸ ಸುದ್ದಿಗಳು

ಬೈಕ್‌ ಗೆ ಢಿಕ್ಕಿ ಹೊಡೆದು ಪರಾರಿಯಾದ ಪಿಕಪ್‌ : ನಿವೃತ್ತ ಶಿಕ್ಷಕ ಮೃತ್ಯು

ಪಂಜದಿಂದ ಪುತ್ತೂರಿಗೆ ಬೈಕ್‌ ನಲ್ಲಿ ಬೈಕ್‌ ನಲ್ಲಿ ಬರುತ್ತಿದ್ದ ವೇಳೆ ನಡೆದ ದುರ್ಘಟನೆ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, ಪುತ್ತೂರು: ಮಾಣಿ ಮೈಸೂರು ಹೆದ್ದಾರಿಯ ಮುಕ್ರಂಪಾಡಿಯಲ್ಲಿ ದ್ವಿಚಕ್ರವಾಹನಕ್ಕೆ ಪಿಕಪ್ ಡಿಕ್ಕಿಹೊಡೆದು ಪರಾರಿಯಾಗಿದೆ.

kadabatimes.in

ಘಟನೆಯಿಂದ ದ್ವಿಚಕ್ರವಾಹನ ಸವಾರ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಂಜ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಭಟ್ ಮೃತಪಟ್ಟ ಬೈಕ್‌ ಸವಾರ.

kadabatimes.in
kadabatimes.in

ಕಾರ್ಯ ನಿಮಿತ್ತ ಕೃಷ್ಣ ಭಟ್‌ ಅವರು ಪಂಜದಿಂದ ಪುತ್ತೂರಿಗೆ ಬೈಕ್‌ ನಲ್ಲಿ ಬೈಕ್‌ ನಲ್ಲಿ ಬರುತ್ತಿದ್ದ ವೇಳೆ ಪಿಕಪ್ ವಾಹನವೊಂದು ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್‌ ಸವಾರ , ಬೈಕ್‌ ನೊಂದಿಗೆ ನೆಲಕ್ಕೆ ಉರುಳಿ ಬಿದ್ದಿದ್ದು , ಇದನ್ನು ಗಮನಿಸಿಯೂ, ಯಾವುದೇ ಮಾನವೀಯತೆಯನ್ನೂ ತೋರಿಸದೆ, ಪಿಕಪ್‌ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

kadabatimes.in

ಸ್ಥಳದಲ್ಲಿ ಸೇರಿದವರು ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು, ತಲೆಗೆ ತೀವ್ರ ತರವಾದ ಗಾಯವಾದ ಹಿನ್ನಲೆಯಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿತ್ತು . ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಪುತ್ತೂರು ಸಂಚಾರಿ ಠಾಣೆಗೆ ಆಸ್ಪತ್ರೆಯಿಂದ ಮಾಹಿತಿ ಬಾರದ ಕಾರಣದಿಂದ ಹಾಗೂ ದೂರು ನೀಡಲು ಯಾರೂ ಬರದ ಕಾರಣದಿಂದ ಇನ್ನೂ ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಮೃತರು ತಾಯಿ, ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.