ಸುಬ್ರಹ್ಮಣ್ಯ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11ರ ಮಂಗಳವಾರ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಇಂದು (ಮಾ.11ರ ಮಂಗಳವಾರ) ಮತ್ತು ನಾಳೆ (ಮಾ.12ರ ಬುಧವಾರ) ಕ್ಷೇತ್ರದಲ್ಲಿ ಇದ್ದುಕೊಂಡು ಸೇವೆಯಲ್ಲಿ ಭಾಗಿಯಾಗಲಿದ್ದಾರೆ. ಸ್ನೇಹಿತರೊಂದಿಗೆ ಕುಕ್ಕೆಗೆ ಆಗಮಿಸಿರುವ ಬಾಲಿವುಡ್ ನ ಖ್ಯಾತ ನಟಿ ಕತ್ರೀನಾ ಕೈಫ್ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಲಿದ್ದಾರೆ.




ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯ ಮಾಡಲಿದ್ದಾರೆ.ಮಾಸ್ಕ್ ಹಾಕಿ, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದು, ಸೇವೆಯಲ್ಲಿ ಭಾಗಿಯಾಗಿದ್ದಾರೆ. ಕ್ಷೇತ್ರದ ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ನಟಿ ಕತ್ರಿನಾ ಕೈಫ್ ಸರ್ಪ ಸಂಸ್ಕಾರ ಸೇವೆಯನ್ನು ನೆರವೇರಿಸಲಿದ್ದಾರೆ.

