ಕಡಬ ಟೈಮ್(KADABA TIMES): ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್, ನಟ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಮಾ.15 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠಕ್ಕೆ ಭೇಟಿ ನೀಡಿದ್ದಾರೆ.


ಕುಟುಂಬ ಸಮೇತರಾಗಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.ಬಳಿಕ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು.




ಪ್ರಭು ದೇವ ಅವರಿಗೆ ‘ಪದ್ಮಶ್ರೀ’ ಜೊತೆಗೆ 2 ರಾಷ್ಟ್ರ ಪ್ರಶಸ್ತಿ ಪುರಸ್ಕಾರ ಸಿಕ್ಕಿದೆ. ಟಿ ನರಸೀಪುರ ತಾಲೂಕಿನ ಪ್ರಭುದೇವ ಅವರು ಅಪ್ಪಟ ಕನ್ನಡದ ಪ್ರತಿಭೆ. 36 ವರ್ಷಗಳಲ್ಲಿ 100ಕ್ಕೂ ಅಧಿಕ ಸಿನಿಮಾಗಳ ಹಾಡಿಗೆ ಕೊರಿಯೋಗ್ರಫಿ ಮಾಡಿದ್ದಾರೆ.


ಪ್ರಭುದೇವ ಅವರು ಒಟ್ಟಿಗೆ 61 ಚಿತ್ರಗಳಲ್ಲಿ ನಟಿಸಿದ್ದಾರೆ, 15 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ, 3 ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ. ಭಾರತದ ಸ್ಟಾರ್ ನಟರ ಜೊತೆ ಪ್ರಭುದೇವ ಕೆಲಸ ಮಾಡಿದ್ದಾರೆ. ಸಲ್ಮಾನ್ ಖಾನ್ ಅವರ ಸಿನಿಮಾಗೆ ಪ್ರಭುದೇವ ನಿರ್ದೇಶನ ಮಾಡಿದ್ದಾರೆ.