33.3 C
Kadaba
Saturday, March 15, 2025

ಹೊಸ ಸುದ್ದಿಗಳು

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ: ಆರು ಪೊಲೀಸರನ್ನು ವರ್ಗಾಯಿಸಿ ಆದೇಶ ಹೊರಡಿಸಿದ ಎಸ್ಪಿ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ (KADABA TIMES):ಪೊಲೀಸ್ ಸಮವಸ್ತ್ರದಲ್ಲೇ ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು ಬಾಗಲಕೋಟೆ ಎಸ್‌ಪಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

kadabatimes.in

ಬಾದಾಮಿಯ ಬನಶಂಕರಿ ದೇವಸ್ಥಾನದ ಬಳಿ ಘಟನೆ ನಡೆದಿತ್ತು. ಜಾಲತಾಣದಲ್ಲಿ ವಿಡಿಯೋ ವೈರಲ್​ ಬೆನ್ನಲ್ಲೇ ಟೀಕೆ ವ್ಯಕ್ತವಾಗಿತ್ತು. ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಜಿಬಿ ದಳವಾಯಿ ಅವರನ್ನು ಹುನಗುಂದ ಠಾಣೆಗೆ, ಡಿಜೆ ಶಿವಪುರ ಎಎಸ್​​ಐ ಬಾಗಲಕೋಟೆ ಗ್ರಾಮೀಣ ಠಾಣೆ, ನಾಗರಾಜ ಅಂಕೋಲೆ ಬೀಳಗಿ ಠಾಣೆ, ಜಿಬಿ ಅಂಗಡಿ ಇಳಕಲ್ ನಗರ ಠಾಣೆ, ರಮೇಶ್ ಈಳಗೇರ ಬಾಗಲಕೋಟೆ ಗ್ರಾಮೀಣ ಠಾಣೆ, ರಮೇಶ್ ಹುಲ್ಲೂರು ಜಿಲ್ಲಾ ಪೊಲೀಸ್ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

kadabatimes.in
kadabatimes.in

ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದ್ದು, ವರ್ಗಾವಣೆಯಾದ ಸಿಬ್ಬಂದಿ ಸದ್ಯ ವಾಸವಿರುವ ವಸತಿಗೃಹ ಕೂಡ ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.

kadabatimes.in

ವಿಡಿಯೋ ವೈರಲ್​ ಬಳಿಕ  ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ, ನನಗೆ ಪೊಲೀಸರು, ರಾಜಕಾರಣಿಗಳು, ನಟರು, ಬಡವರು, ಶ್ರೀಮಂತರು ಎಲ್ಲರೂ ಒಂದೆ ಸಮಾನ. ಎಲ್ಲರೂ ಬಂದು ಆಶೀರ್ವಾದ ಪಡೆಯುತ್ತಾರೆ. ದುಡ್ಡು ಕೊಟ್ಟು ಆಶೀರ್ವಾದ ಮಾಡುವುದು ನಮ್ಮ ಮಠದ ಪರಂಪರೆ. ಪೊಲೀಸರು ಭಕ್ತರಾಗಿ ಕಾಲಿಗೆ ನಮಸ್ಕಾರ‌ ಮಾಡಿದ್ದಾರೆ. ಅವರಿಗೆ ನಾವು ಲಂಚ ಕೊಟ್ಟಿಲ್ಲ. ನಾವು ದಿವಸದ ದಾಸೋಹಕ್ಕೆ ಎಷ್ಟು ಹಣ ಬೇಕು ಅಷ್ಟು ಇಟ್ಕೊಂಡು. ಉಳಿದ ಹಣವನ್ನು ನಾವು ಭಕ್ತರಿಗೆ ಕೊಡುತ್ತೇವೆ. ಇದು ಭಕ್ತರನ್ನು ಬೆಳೆಸುವ ಮಠವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.