ಕಡಬ ಟೈಮ್,KADABA TIMES: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ್ದಾರೆ.


ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಮನರಂಜನಾ ಸ್ಪರ್ಧೆಗಳನ್ನು ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು.




ಬಳಿಕ ವಿದ್ಯಾರ್ಥಿಗಳಿಗೆ ಹಣ್ಣು ಹಾಗೂ ಸಿಹಿ ತಿಂಡಿಗಳನ್ನು ನೀಡಿದರು.


ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ , ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಶೈಲಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಹಸ್ತವಿ, ಅರ್ಚನಾ ಅಂಕಿತ ಕಾರ್ಯಕ್ರಮ ನಿರ್ವಹಿಸಿದರು.