ಕಡಬ ಟೈಮ್ (KADABA TIMES) : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಡಿಂಬಾಳ ಗ್ರಾಮದ ಓಂತ್ರಡ್ಕ ಶಾಲೆಯ ಸಮೀಪ ಮಾ.21 ರಂದು ಸಂಭವಿಸಿದೆ.


ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಸಕಲೇಶಪುರ ಮೂಲದ ಮದನ್ ಎಂದು ಹೇಳಲಾಗುತ್ತಿದೆ




ಓಂತ್ರಡ್ಕ ಶಾಲೆಯ ಸಮೀಪ ತನ್ನ ಕಾರು ನಿಲ್ಲಿಸಿ ವಿಷ ಸೇವಿಸಿ ಬಳಿಕ ತನ್ನ ಮನೆಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದ ಎನ್ನಲಾಗಿದೆ.


ಈ ಬೆನ್ನಲ್ಲೇ ವಾಂತಿ ಮಾಡುವುದನ್ನು ಕಂಡ ಸ್ಥಳೀಯರು 112 ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕಳುಹಿಸಿಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.