ಕಡಬ ಟೈಮ್ಸ್(KADABA TIMES): ಸಾರಣೆ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದು ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕಡಬ ತಾಲೂಕು ಬಳ್ಪ ಗ್ರಾಮದ ಜೋಗಿ ಮನೆ ಚೆನ್ನಕೇಶವ ಜೋಗಿ(61 ವ) ನಾಪತ್ತೆಯಾದವರು.


ಮಾ.11 ರಂದು ತನ್ನ ಮನೆಯಿಂದ ಕೋಡಿಂಬಾಳಕ್ಕೆ ಸಾರಣೆ ಕೆಲಸಕ್ಕೆ ಹೋಗುವುದಾಗಿ ಹೋದವರು ಇಲ್ಲಿಯ ತನಕ ಹಿಂತಿರುಗಿ ಬರಲಿಲ್ಲ.ಇವರ ಬಳಿ ಇದ್ದ ಮೊಬೈಲ್ ಸಂಖ್ಯೆ ಸ್ವಿಚ್ ಆಫ್ ಎಂದು ಬರುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಮನೆಯಿಂದ ಹೊರ ಹೋಗುವ ವೇಳೆ ಉದ್ದ ತೋಳಿಅ ಹಸಿರು ಬಣ್ಣದ ಶರ್ಟ್,ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು.ಕನ್ನಡ, ತುಳು, ಮಲಯಾಳಂ ಭಾಷೆ ಮಾತನಾಡುತ್ತಾರೆ. ಮಾಹಿತಿ ಸಿಕ್ಕಿದಲ್ಲಿ ಸುಬ್ರಹ್ಮಣ್ಯ ಠಾಣೆಗೆ ತಿಳಿಸುವಂತೆ ಕೋರಲಾಗಿದೆ .


ನಾಪತ್ತೆಯಾದ ಚೆನ್ನಕೆಶವ ಅವರ ಮಗ ಚಿತ್ತರಂಜನ್ ಅವರು ನೀಡಿದ ದೂರಿನಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.