ಕಡಬ ಟೈಮ್(KADABA TIMES): ನೆಲ್ಯಾಡಿ : ಲಾರಿ, ಕಾರು ಹಾಗೂ ಪಿಕಪ್ ನಡುವೆ ಸರಣಿ ಅಪಘಾತ ಸಂಭವಿಸಿ ಕಾರು ಹಾಗೂ ಪಿಕಪ್ ಜಖಂಗೊಂಡ ಘಟನೆ ಮಾ.27ರಂದು ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕಂಪನಿಯವರ ಲಾರಿಯು ಮಣ್ಣಗುಂಡಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದರ ಹಿಂಬದಿಗೆ ಡಿಕ್ಕಿಯಾಗಿದೆ.




ಡಿಕ್ಕಿಯಾದ ರಭಸಕ್ಕೆ ಕಾರು ಎದುರಿನಿಂದ ಬರುತ್ತಿದ್ದ ಪಿಕಪ್ ವಾಹನವೊಂದಕ್ಕೆ ಡಿಕ್ಕಿಯಾಗಿದೆ ಎಂದು ವರದಿಯಾಗಿದೆ.


ಘಟನೆಯಲ್ಲಿ ಪಿಕಪ್ ಹಾಗೂ ಕಾರು ಜಖಂಗೊಂಡಿದ್ದು ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.