24.7 C
Kadaba
Friday, April 18, 2025

ಹೊಸ ಸುದ್ದಿಗಳು

2nd PUC Result-ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಶಿಕ್ಷಣ ಸಚಿವ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಈ ಸಾಲಿನ  ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.

kadabatimes.in

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.

kadabatimes.in
kadabatimes.in
kadabatimes.in

ಏಪ್ರಿಲ್‌ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದರಿಂದ, ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಅಪರಾಹ್ನ 1-30ಕ್ಕೆ ವೆಬ್‌ ಸೈಟ್‌ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. www.Karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.