23.5 C
Kadaba
Saturday, April 19, 2025

ಹೊಸ ಸುದ್ದಿಗಳು

ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದ ವ್ಯಕ್ತಿ ಕುಲ್ಕುಂದದಲ್ಲಿ ಪೊಲೀಸ್ ವಶಕ್ಕೆ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

KADABA TIMES(ಕಡಬ ಟೈಮ್ಸ್):  ಸುಬ್ರಹ್ಮಣ್ಯ: ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು  ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು  ಗ್ರಾಮಸ್ಥರೇ  ಹಿಡಿದು ಪೊಲೀಸರಿಗೆ  ಒಪ್ಪಿಸಿದ ಘಟನೆ ಎ.15 ರಂದು ಕುಲ್ಕುಂದದಲ್ಲಿ  ನಡೆದಿದೆ.

kadabatimes.in

ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ   ಬಸ್ಸಿಗೆ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ  ಕಾಡು ಹಂದಿ ಉರುಳಿಗೆ ಬಿದ್ದಿದ್ದು ಮಾಂಸ ಬೇಕಾದರೆ ಹೇಳಿ ಎಂದು ಈತ  ಹೇಳಿದ್ದ.  ಮಹಿಳೆಯು ನಿರಾಕರಿಸಿ ಅಲ್ಲಿನ ಸ್ಥಳೀಯರಿಗೆ ಮಾಹಿತಿ ನೀಡಿದ್ದರು.  ಈ ಸಂದರ್ಭ ಈ ಹಿಂದೆ ಹಣ ನೀಡಿ ಈತನಿಂದಲೇ ಮೋಸ ಹೋದ ವ್ಯಕ್ತಿಯೊಬ್ಬರು ಎದುರುಕೊಂಡಿದ್ದು ಈತನನ್ನು ಪ್ರಶ್ನಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

kadabatimes.in

ಈ ಸುದ್ದಿಯನ್ನೂ ಓದಿರಿ:ಕಡಬ:ತಾಲೂಕು ಆಡಳಿತ ಸೌಧದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

kadabatimes.in

ಪೊಲೀಸರ ವಿಚಾರಣೆ ಈತ ಕಡಬ ತಾಲೂಕಿನ ಮರ್ದಾಳದ ವ್ಯಕ್ತಿ ಎಂದು ತಿಳಿದು ಬಂದಿದ್ದು  ಹಲವರಿಗೆ ವಿವಿಧ ರೀತಿಯಲ್ಲಿ  ವಂಚಿಸಿರುವುದು ತಿಳಿದು ಬಂದಿದೆ. ದೂರು ನೀಡಲು ಯಾರು ಮುಂದೆ ಬಾರದ ಕಾರಣ ಆತನನ್ನು ವಿಚಾರಿಸಿ  ಬಿಟ್ಟಿರುವುದಾಗಿ ಸುಬ್ರಹ್ಮಣ್ಯ ಪೊಲೀಸರು ಮಾಹಿತಿ ನೀಡಿದ್ದಾರೆ . ಈತ ಕಟ್ಟಿಗೆ ಇದೆ ಎಂದು ಹೇಳಿ ಕುಲ್ಕುಂದ ಭಾಗದಲ್ಲಿಯೂ ಮುಂಗಡ ಹಣ ಪಡೆದಿದ್ದ ಎನ್ನಲಾಗಿದೆ.

ಸದ್ಯ ಈತನ ಪೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಹಂಚಿಕೊಂಡು ಮೋಸ ಹೋಗದಂತೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

kadabatimes.in

ಈತ ಫೆಬ್ರವರಿ ತಿಂಗಳಲ್ಲಿ ಕೆಡ್ಡಸದ ಸಂದರ್ಭ  ಎಡಮಂಗಲದಲ್ಲಿ  ವ್ಯಕ್ತಿಯೊಬ್ಬರು  ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಬೈಕ್ ನಲ್ಲಿ ಬಂದು   “ಹಂದಿ ಮಾಂಸ ಇದೆ, ಬೇಕಾದರೆ ಕೊಡುತ್ತೇನೆ ಎಂದು ಹೇಳಿ ಹಲವರಿಂದ  ಹಣ ಪಡೆದು  ಹಿರಿಯ ವ್ಯಕ್ತಿಯನ್ನು ಪಾಲೋಲಿ ಸೇತುವೆ ಬಳಿ  ಬೈಕ್ ನಿಂದ ಇಳಿಸಿ ಕ್ಷಣಮಾತ್ರದಲ್ಲಿ ಹಂದಿ ಮಾಂಸ ತರುವುದಾಗಿ ಹೇಳಿ  ವಂಚಿಸಿದ್ದ. ವಂಚಿಸಿದ ವ್ಯಕ್ತಿತನ್ನ ಬೈಕ್ ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿತ್ತು.ಆ ಸಂದರ್ಭದಲ್ಲಿ ಯಾರೂ ಠಾಣೆಗೆ ದೂರು ನೀಡದ ಕಾರಣ ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.