26.1 C
Kadaba
Saturday, April 19, 2025

ಹೊಸ ಸುದ್ದಿಗಳು

ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಗುಂಡಿನ ದಾಳಿ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್(KADABA TIMES):  ಮಾಜಿ ಡಾನ್​​ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ  ಘಟನೆ ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.

kadabatimes.in

ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್​ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್​ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

kadabatimes.in

ರಷ್ಯಾದಲ್ಲಿ ನೆಲೆಸಿರುವ ರಿಕ್ಕಿ ರೈ ಎರಡು ದಿನಗಳ ಹಿಂದಷ್ಟೇ ಭಾರತಕ್ಕೆ ಬಂದಿದ್ದರು. ಬಿಡದಿ ಮನೆಯಿಂದ ತಡರಾತ್ರಿ ತನ್ನ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು.ರಾತ್ರಿ  ಸುಮಾರು 11.30 ರ ಹೊತ್ತಿಗೆ ಮನೆಯಿಂದ ಹೊರಬರುತ್ತಿದ್ದಂತೆ ಗೇಟ್​​ ಬಳಿ ದುಷ್ಕರ್ಮಿ, ಎರಡು ಸುತ್ತಿನ ಫೈರಿಂಗ್​ ಮಾಡಿದ್ದಾನೆ.

kadabatimes.in

ರಿಕ್ಕಿ ರೈ ಪ್ರತಿ ಬಾರಿ ತಾವೇ ಕಾರು ಡ್ರೈವ್​ ಮಾಡುತ್ತಿದ್ದರು. ಹೀಗಾಗಿ ಡ್ರೈವರ್​​ ಸೀಟ್​  ಗುರಿ ಮಾಡಿ ದಾಳಿ​ ಮಾಡಲಾಗಿತ್ತು. ಆದರೆ ತಡರಾತ್ರಿ ತನ್ನ ಬದಲು ಚಾಲಕನಿಗೆ ಕಾರು ಚಲಾಯಿಸಲು ಹೇಳಿದ್ದ ರಿಕ್ಕಿ ರೈ, ಹಿಂಬದಿ ಸೀಟ್​ನಲ್ಲಿ ಗನ್​ ಮ್ಯಾನ್​ ಜತೆ ಕುಳಿತಿದ್ದರು. ಹೀಗಾಗಿ ಫೈರಿಂಗ್​ ಆಗುತ್ತಿದ್ದಂತೆ ಕಾರು ಚಾಲಕ ರಾಜು ಮುಂದೆ ಬಗ್ಗಿದ್ದು, ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.​

ಕಾಂಪೌಂಡ್ ರಂಧ್ರದಿಂದ  ಗುಂಡಿನ ದಾಳಿ: ಖಾಸಗಿಯವರಿಗೆ ಸೇರಿದ, ರಸ್ತೆ ಪಕ್ಕದ ಕಾಂಪೌಡ್ ಗ್ಯಾಪ್​ ಮಧ್ಯೆ ಬಚ್ಚಿಟ್ಟುಕೊಂಡು ದುಷ್ಕರ್ಮಿ ದಾಳಿ ಮಾಡಿದ್ದಾನೆ. ಅಂದರೆ ಕಾರು ಬೆಂಗಳೂರಿಗೆ ಹೊರಡಬೇಕಾದರೆ ಬಲಗಡೆ ಭಾಗದಲ್ಲಿ ಒಂದು ಕಾಂಪೌಂಡ್​ ಗ್ಯಾಪ್​ ಮಧ್ಯೆ ಅವಿತು, ಅದರ ಒಂದು ರಂಧ್ರದಿಂದಲೇ ಫೈರಿಂಗ್​ ಆಗಿದೆ. ಬಿಡದಿ ಮನೆಯಿಂದ​​​ ಕಾರಿನಲ್ಲಿ ಮೂವರು ತೆರಳುತ್ತಿದ್ದರು. ರಿಕ್ಕಿ ರೈ ಜತೆಗೆ ಗನ್​ ಮ್ಯಾನ್, ಕಾರು ಚಾಲಕ, ಹಿಂಬದಿ ಆಸನದಲ್ಲಿ ರಿಕ್ಕಿ ರೈ ಕುಳಿತಿದ್ದರು.

kadabatimes.in

ಪೊಲೀಸರ ಮಾಹಿತಿ ಪ್ರಕಾರ 70ಎಂಎಂ ಬುಲೆಟ್​ನ ಶಾಟ್​ಗನ್​ ಬಳಸಿ ಫೈರಿಂಗ್ ನಡೆಸಲಾಗಿದೆ. ಒಂದು ಬಾರಿ ಮಾತ್ರ ಗುಂಡು ಹಾರಿಸಿದ್ದು, ಕಾರಿನ ಡೋರ್​ ಸೀಳಿ ಬಂದ ಬುಲೆಟ್, ಡ್ರೈವರ್ ಸೀಟ್ ಕುಶನ್ ಒಳಗೆ ನುಗ್ಗಿದೆ. ನಂತರ ಕಾರಿನ ಹಿಂಬದಿ ಸೀಟ್​ನ ಎಡಭಾಗದ ಡೋರ್​ಗೆ ತಾಗಿದೆ. ಈ ವೇಳೆ ಡ್ರೈವರ್ ಬೆನ್ನಿಗೆ ಹಾಗೂ ರಿಕ್ಕಿ ರೈ ಮೂಗು ಹಾಗೂ ಕೈಗೆ ಗಾಯವಾಗಿದೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.