ಅಶೋಕ ಜನಮನ ಕಾರ್ಯಕ್ರಮದಲ್ಲಿ ನೂಕುನುಗ್ಗಲು

kadaba times

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ನಡೆದ ‘ಅಶೋಕ ಜನಮನ -2025’ ನಡೆದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾದ ಘಟನೆ ಇಂದು ಸಂಜೆ ನಡೆದಿದೆ.

kadaba times
uniq

ಕ್ರೀಡಾಂಗಣದ ಸಾಮರ್ಥ್ಯಕ್ಕಿಂದ ಹೆಚ್ಚು ಜನ ಭಾಗಿಯಾಗಿದ್ದರಿಂದ ನೂಕುನುಗ್ಗಲು ಉಂಟಾಗಿ ಆಮ್ಲಜನಕ ಕೊರತೆಯಿಂದ ಜನ ಅಸ್ವಸ್ಥರಾಗಿದ್ದಾರೆ. ಈ ಸಂದಭದಲ್ಲಿ ಕುಡಿಯಲು ನೀರು ಸಿಗದೆ ಜನರ ಪರದಾಡುವ ಪರಿಸ್ಥಿತಿ ಬಂದಿತ್ತು .ವೃದ್ದರು ,ಮಕ್ಕಳು ಪೊಲೀಸರ ಸಹಾಯ ಕೇಳಿದ್ದು ಸ್ಥಳದಲ್ಲಿದ್ದ ಪೊಲೀಸರು ಹಲವರನ್ನು ರಕ್ಷಿಸಿದ್ದಾರೆ.

ಮಳೆ ಬಂದು ಕೆಸರು ತುಂಬಿದ್ದ ಮೈದಾನದ ಅವ್ಯವಸ್ಥೆಯಲ್ಲಿ ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಬಂದಿದ್ದ ಜನ ಪರದಾಡುವಂತಾಯಿತು. ಅಸ್ವಸ್ಥರಾದವರಿಗೆ ಪುತ್ತೂರು ತಾಲೂಕು ಸರ್ಕಾರಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮಾಹಿತಿ ಪ್ರಕಾರ  ಯೋಗೀತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ(50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30) ಎಂಬವರು ನೂಕುನುಗ್ಗಲಾದ ಮೇಲೆ ಆಮ್ಲಜನಕದ ಕೊರತೆಯುಂಟಾಗಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಮಾಹಿತಿ ಲಭಿಸಿದೆ.

kadaba times
kadaba times

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾಹಿತಿ ನೀಡಿ, ಕಾರ್ಯಕ್ರಮದಲ್ಲಿ ಆಹಾರ ಮತ್ತು ಗಿಫ್ಟ್ ವಿಳಂಬವಾಗಿ ನೀಡಿದ ಕಾರಣ ಹೈಪೊಗ್ಲೇಸಮೀಯ ಅಥವಾ ಡಿಹೈಡ್ರೇಷನ್ ಉಂಟಾಗಿದೆ, 3ಮಹಿಳೆಯರಿಗೆ ಐ.ವಿ. ಫ್ಲೂಯಿಡ್ಸ್ ನೀಡಲಾಗಿದ್ದು 7 ಜನ ಮಹಿಳೆಯರು ಈಗಾಗಲೇ ಹೊರರೋಗಿಯಾಗಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ.

Related Articles

Latest Articles