ಸರಕಾರಿ ಜಾಗದಲ್ಲಿ ಮರ ಕಡಿದು ಸಾಗಾಟಕ್ಕೆ ಯತ್ನ: ಅರಣ್ಯ ಇಲಾಖೆಯಿಂದ ದಾಳಿ

kadaba times

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ವೇಣೂರು ವಲಯ ಅರಣ್ಯ ಇಲಾಖೆ ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

kadaba times
uniq

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಪಲ್ಲದಡಿ ಎಂಬಲ್ಲಿ    ಸರಕಾರಿ ಜಾಗದಲ್ಲಿ ಸುಮಾರು 15ರಿಂದ 20 ಆಕೇಶಿಯ, ಮ್ಯಾಂಜಿಯಂ ಸೇರಿದಂತೆ ಕೆಲ ಮರಗಳನ್ನು ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ವೇಣೂರು ವಲಯ ಅರಣ್ಯಾಧಿಕಾರಿ ಭರತ್ ಯು.ಜಿ.ನೇತೃತ್ವದ ತಂಡ ಅ.8 ರಂದು  ದಾಳಿ ನಡೆಸಿದ್ದಾರೆ.

kadaba times
kadaba times

ಆರೋಪಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಡಿದ ಮರಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಹಜರು ಪ್ರಕ್ರಿಯೆ ನಡೆಸಿದ್ದು ಈ ಕುರಿತು ಬೆಳ್ತಂಗಡಿ ನ್ಯಾಯಾಲಯಕ್ಕೆ ಅ.9ರಂದು ಮಹಜರು ಹಾಗೂ ಘಟನಾ ವರದಿ ನೀಡಿ ಪ್ರಕರಣ ದಾಖಲಿಸಲು ಅನುಮತಿ ಪಡೆದು ವೇಣೂರು ಅರಣ್ಯ ಇಲಾಖೆಯಲ್ಲಿ ಆರೋಪಿ ಬೆನ್ನಿ ಪ್ರಸಾದ್ ವಿರುದ್ಧ ಪ್ರಕರಣ ದಾಖಲಾಯಿಸಿ ತನಿಖೆ ಮುಂದುವರಿಸಲಿದ್ದಾರೆ.

Related Articles

Latest Articles