
ಕಡಬ: ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.


ಮೃತ ಯುವಕನನ್ನು ಕಡಬ ತಾಲೂಕಿನ ಸವಣೂರು ಸಮೀಪದ ಕುದ್ಮಾರು ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಅವರ ಗೆಳೆಯರಾಗಿರುವ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಉದ್ಯೋಗದ ಸಂದರ್ಶನ ಮುಗಿಸಿ ಉದ್ಯೋಗಕ್ಕೆ ಆಯ್ಕೆಯಾಗಿ ಮಂಗಳೂರಿನಿಂದ ಸವಣೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.


ನೂತನವಾಗಿ ನಿರ್ಮಾಣಗೊಂಡ ಮೆಲ್ಕಾರ್ ಎಲಿವೆಟೆಡ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಚಾಲಕ ಕಾರ್ತಿಕ್ ಕೊನೆಯುಸಿರೆಳೆದಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
