ದೀಪಾವಳಿಗಾಗಿ ಅಲಂಕಾರ ದೀಪ ಅಳವಡಿಸುತ್ತಿದ್ದಾಗ ವಿದ್ಯುತ್ ಶಾಕ್: ಯುವಕ ಮೃತ್ಯು

kadaba times

ಕಡಬ ಟೈಮ್ಸ್, ಪ್ರಮುಖ ಸುದ್ದಿ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ ಸೀತಾಂಗೋಳಿ ಸಮೀಪದ ಪುತ್ತಿಗೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. 

kadaba times
uniq

ಪುತ್ತಿಗೆ ಆಚಾರಿಮೂಲೆ ನಿವಾಸಿ ರಾಜೇಶ್ ಆಚಾರ್ಯ ( 37) ಮೃತಪಟ್ಟವರು.ಇವರು ಬಡಗಿ ವೃತ್ತಿ ನಿರ್ವಹಿಸುತ್ತಿದ್ದರು.

ದೀಪಾವಳಿ ಅಂಗವಾಗಿ ಮನೆಯಂಗಳದಲ್ಲಿ ಅಲಂಕಾರ ವಿದ್ಯುದ್ದೀಪಗಳನ್ನು ಅಳವಡಿಸುತ್ತಿದ್ದಾಗ ರಾಜೇಶ್ ಶಾಕ್ ತಗುಲಿದೆ. ಗಂಭೀರಾವಸ್ಥೆಯಲ್ಲಿದ್ದ ಅವರನ್ನು ಮನೆಯವರು ಕೂಡಲೇ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ. 

kadaba times
kadaba times

ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Related Articles

Latest Articles