
ಕಡಬ ಟೈಮ್ಸ್, ಪ್ರಮುಖ ಸುದ್ದಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಾಲಕಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.


ಅ.26 ರಂದು ನಿಂತಿಕಲ್ಲಿನ ಬಸ್ ನಿಲ್ದಾಣದಲ್ಲಿ ಕುಳಿತುಕೊಂಡಿದ್ದ ಬಾಲಕಿಗೆ ಗಿರಿಧರ ಎಂಬಾತ ಲೈಂಗಿಕ ಕಿರುಕುಳ ನೀಡಿರುವುದಾಗಿ ರಿಕ್ಷಾ ಚಾಲಕರೊಬ್ಬರು ಠಾಣೆಯಲ್ಲಿ ದೂರು ನೀಡಿದ್ದರು.


ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಪೊಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.
