
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠಲಗೌಡ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.


ಧರ್ಮಸ್ಥಳ ಠಾಣೆಯಲ್ಲಿ ಚಿನ್ನಯ್ಯನ ಹೇಳಿಕೆಯ ಆಧಾರದ ಮೇಲೆ ದಾಖಲಾಗಿದ್ದ ಸಮೂಹಿಕ ಅಂತ್ಯ ಕ್ರಿಯೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್, ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಲು ಕೋರಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಹಾಗೂ ವಿಠಲಗೌಡ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮುಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆಗೆ ನಡೆಸಿತು.


ಅರ್ಜಿದಾರರ ಪರ ವಕೀಲರು ಹಾಗೂ ಸರಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಎಫ್ಐಆರ್ಗೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಗಳಿಗೆ ಅರ್ಜಿಯ ಮುಂದಿನ ವಿಚಾರಣೆಯವರೆಗೆ ತಡೆ ನೀಡಿ, ವಿಚಾರಣೆಯನ್ನು ನವೆಂಬರ್ 12ಕ್ಕೆ ಮುಂದೂಡಿತು.
