ನೆಲ್ಯಾಡಿ ವಿವಿ ಕಾಲೇಜಿನಲ್ಲಿ ಲಲಿತಾ ಕಲಾ ಚಟುವಟಿಕೆಗಳ ಉದ್ಘಾಟನೆ

kadaba times

ಕಡಬ ಟೈಮ್ಸ್, ನೆಲ್ಯಾಡಿ: ಇಲ್ಲಿನ  ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ  2025-26ನೇ ಲಲಿತಾ ಕಲಾ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಆಯ್ಕೆ ಸ್ಪರ್ಧೆ ಕಾರ್ಯಕ್ರಮ ಸೆ.29ರಂದು ನಡೆಯಿತು.

kadaba times
uniq

ಮುಖ್ಯ ಅತಿಥಿಗಳಾಗಿ ಸಂತ ಜಾರ್ಜ್ ವಿದ್ಯಾ ಸಂಸ್ಥೆಯ ಇತಿಹಾಸ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವದ ಕುರಿತು ವಿವರಿಸಿ ವಿದ್ಯಾರ್ಥಿಗಳು ಮುಂದಿನ ಸಶಕ್ತ ಬದುಕನ್ನು ರೂಪಿಸಿಕೊಳ್ಳಲು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಈ ಮುಖಾಂತರ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜು ಉಪನ್ಯಾಸಕ  ಡಾ. ಸೀತಾರಾಮ ಪಿ ಅವರು,  ವ್ಯಕ್ತಿ ಮತ್ತು ಸಮಾಜದ ಸರ್ವತೋಮುಖ ಸಕಾರಾತ್ಮಕ ಬೆಳವಣಿಗೆಯಲ್ಲಿ ಸಾಂಸ್ಕೃತಿಕ ವಿಭಿನ್ನತೆಯ ಅಸ್ಮಿತೆಯ ಉಳಿವು ಮುಖ್ಯವಾದುದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

kadaba times
kadaba times

ಲಲಿತಾ ಕಲಾ ಸಂಘದ ಸಂಚಾಲಕಿ ಪಾವನ ರೈ ಸ್ವಾಗತಿಸಿ, ಉಪನ್ಯಾಸಕಿ ಚಂದ್ರಕಲಾ ಧನ್ಯವಾದವಿತ್ತರು.  ದ್ವಿತೀಯ ಬಿಕಾಂ ಕೈರುನ್ನಿಸಾ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಆಯ್ಕೆ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Related Articles

Latest Articles