ಮನೆಯೊಂದರ ಹಿಂಭಾಗದ ಗುಡ್ಡದಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಪೊಲೀಸ್ ರೈಡ್

kadaba times

ಮೂಡುಬಿದಿರೆಯ ಕಟ್ಟೆಯಲ್ಲಿ ಮನೆಯೊಂದರ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಮಾಂಸ ಸಹಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ದಾಳಿ ನಡೆಸಿ 50ಕೆ.ಜಿ. ಮಾಂಸ ಹಾಗೂ, ಕದ್ದು ತಂದಿದ್ದಾರೆನ್ನಲಾದ 3 ದನಗಳನ್ನು ವಶಕ್ಕೆ ಪಡೆದು ಗೋಶಾಲೆಗೆ ಒಪ್ಪಿಸಲಾಗಿದೆ.

ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಆತನ ಪುತ್ರ ಸೊಹೇಲ್, ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪೊಲೀಸ್ ದಾಳಿ ಸಂದರ್ಭ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

kadaba times
kadaba times
kadaba times
uniq

Related Articles

Latest Articles