ಗುತ್ತಿಗಾರಿನಲ್ಲಿ ಸ್ಥಳಾಂತರಗೊಂಡ SCDCC ಬ್ಯಾಂಕಿನ ಶಾಖೆ ಉದ್ಘಾಟಿಸಿದ ಸುಳ್ಯ ಶಾಸಕಿ

kadaba times

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಕೇವಲ ಬ್ಯಾಂಕಿನ ಚಟುವಟಿಕೆ ಮಾತ್ರವಲ್ಲದೇ ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಅವರು ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್ ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್‍ಸಿಡಿಸಿಸಿ ಬ್ಯಾಂಕಿನ ಗುತ್ತಿಗಾರು ಶಾಖೆಯನ್ನು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

kadaba times
uniq

ಡಿಸಿಸಿ ಬ್ಯಾಂಕ್ ಸಹಕಾರಿ ಸಂಘಗಳಿಗೆ ಬೆನ್ನೆಲುಬಾಗಿ ನಿಂತಿದೆ. ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ, ಬ್ಯಾಂಕ್‍ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಅದರಂತೆ ಬೆಳೆಯುತ್ತಿರುವ ಗುತ್ತಿಗಾರು ಪೇಟೆಯಲ್ಲಿನ ಶಾಖೆಯಲ್ಲೂ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿರುವುದು ಗ್ರಾಹಕರಿಗೂ, ಇಲ್ಲಿನ ಪ್ರದೇಶದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.

ಡಿಸಿಸಿ ಬ್ಯಾಂಕಿನ ಉಪಾದ್ಯಕ್ಷ ವಿನಯ ಕುಮಾರ್ ಸೂರಿಂಜೆ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕಿನ ನಿರ್ದೆಶಕ ಕುಶಾಲಪ್ಪ ಗೌಡ.ಪಿ. ಶಾಖೆಯನ್ನು ಮತ್ತು ಎ.ಟಿ.ಎಂ. ಕೇಂದ್ರವನ್ನು ಉದ್ಘಾಟಿಸಿದರು. ಭದ್ರತಾ ಕೋಶವನ್ನು ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ, ವಾಹನ ಸಾಲಪತ್ರ ವಿತರಿಸಿದರು.
ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ ಠೇವಣಿ ಪತ್ರ ವಿತರಣೆ ಮಾಡಿದರು. ಗುತ್ತಿಗಾರು ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಕೀ ವಿತರಿಸಿದರು. ಡಿಸಿಸಿ ಬ್ಯಾಂಕ್ ನಿರ್ದೆಶಕ ಎಸ್.ಎನ್.ಮನ್ಮಥ ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಸೇರಿದಂತೆ ಪ್ರಮುಖರಿದ್ದರು.

kadaba times
kadaba times

 

Related Articles

Latest Articles