ಪೊಲೀಸರ ವಿಡಿಯೋ ಮಾಡುತ್ತೀಯಾ…ಎಂದು ಆಟೋ ಚಾಲಕನಿಗೆ ನಿಂದಿಸಿದ ಟ್ರಾಫಿಕ್ ಪೊಲೀಸರಿಬ್ಬರು ಕರ್ತವ್ಯದಿಂದ ಅಮಾನತು

kadaba times

ದಕ್ಷಿಣ ಕನ್ನಡ/ಪುತ್ತೂರು:  ಸಂಚಾರಿ ಪೊಲೀಸರ ಸೂಚನೆಯನ್ನು ಪಾಲಿಸಲಿಲ್ಲವೆಂಬ ಕಾರಣಕ್ಕೆ ಬೆನ್ನಟ್ಟಿಕೊಂಡು ಬಂದು ಅಟೋ ಚಾಲಕನ ಮೈ ಮೇಲೆ ಕೈ ಮಾಡಿ ಅವಾಚ್ಯ ಪದಗಳಿಂದ ಬೈದು ನಿಂದಿಸಿದ ಘಟನೆ ಸಂಬಂಧಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

kadaba times
uniq

ಇದೀಗ ಈ ಘಟನೆಗೆ ಸಂಬಂಧಿಸಿ  ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣಾ  ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ 2283,  ಶ್ರೀ ಶೈಲ ಎಂ ಕೆ ಎಂಬವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಆಟೋ ಚಾಲಕ ಬಶೀರ್  ಎಂಬವರು ಸಮವಸ್ತ್ರ ಧರಿಸದೇ ಆಟೋ ಚಲಾಯಿಸಿಕೊಂಡು ಬರುತ್ತಿರುವಾಗ ,ಪೊಲೀಸರು  ಕೈ ಸನ್ನೆ ಮೂಲಕ ನಿಲ್ಲಿಸಲು ಸೂಚಿಸಿದ್ದರೂ, ಚಾಲಕ  ತನ್ನ ವಾಹನವನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿಕೊಂಡು ಬಂದು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿರುತ್ತಾನೆ , ಈ ಕುರಿತು ಆತನನ್ನು ಹಿಂಬಾಲಿಸಿ ವಾಹನವನ್ನು ತಡೆದು ಆತನನ್ನು  ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗಿರುತ್ತದೆ.  ಇದನ್ನು ಪರಿಶೀಲಿಸಿ    ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಎಂದು ತಿಳಿಸ್ಸಿದ್ದಾರೆ.

kadaba times
kadaba times

ಹಿನ್ನೆಲೆ:  ಟ್ರಾಫಿಕ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ಆಟೋ ರಿಕ್ಷಾವೊಂದನ್ನು ಬೆನ್ನಟ್ಟಿಕೊಂಡು ಬಂದಿರುವುದು,  ಬೈಕ್ ನಿಲ್ಲಿಸಿ ರಿಕ್ಷಾವನ್ನು ತಡೆದು ನಿಲ್ಲಿಸಿದ ಪೊಲೀಸರು ರಿಕ್ಷಾವನ್ನು ಆಫ್ ಮಾಡಲು ಸೂಚಿಸಿ ಅಟೋ ರಿಕ್ಷಾದ ಕೀ ಕಿತ್ತುಕೊಳ್ಳಲು ಯತ್ನಿಸುವುದು,  ಪೊಲೀಸರ ವಿಡಿಯೋ ಮಾಡುತ್ತೀಯಾ. . ಎಂದು ಪ್ರಶ್ನಿಸುವುದು,  ಆತನ ಅಂಗಿಯನ್ನು ಹಿಡಿದೆಳೆಯುವುದು, ಅವಾಚ್ಯ ಪದಗಳಿಂದ ನಿಂದಿಸುವುದು ಮತ್ತು ಮೈ ಮೇಲೆ ಕೈ ಮಾಡುವುದು, ಹರಿದಾಡುವ ವಿಡಿಯೋ ದೃಶ್ಯಾವಳಿಯಲ್ಲಿ ಕಾಣಿಸಿತ್ತು . ಈ ವೀಡಿಯೋ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಆಕ್ರೋಶಗೊಂಡ ಸಾರ್ವಜನಿಕರು ಪ್ರಕರಣವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನ ಸೆಳೆಯುವ ವರೆಗೆ ಹಂಚಿಕೊಳ್ಳಿ ಎಂದು ವಿನಂತಿಸಿ ಮತ್ತಷ್ಟು ಗ್ರೂಪುಗಳಿಗೆ ವಿಡಿಯೋ ಹರಿದಾಡುವಂತೆ ಮಾಡಿದ್ದರು.

ಪ್ರಕರಣದ ವಿಡಿಯೋ ದೃಶ್ಯಾವಳಿಯನ್ನು ವೀಕ್ಷಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದ್ದು, ವಿಡಿಯೋದಲ್ಲಿ ಇಬ್ಬರು ಪೊಲೀಸರ ಕೃತ್ಯ ತಪ್ಪು ಎಂದು ಸ್ಪಷ್ಟವಾಗಿ ತೋರುತ್ತಿದ್ದು, ಘಟನೆಯ ಕಾರಣವನ್ನು ಪರಿಶೀಲಿಸಲಾಗುವುದು ಮತ್ತು ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದರು.

Related Articles

Latest Articles