ಚಪ್ಪಲಿಯೊಳಗೆ ಅವಿತುಕೊಂಡಿದ್ದ ಹಾವು ಕಚ್ಚಿ ಮಹಿಳೆ ಸುಳ್ಯ ಆಸ್ಪತ್ರೆಗೆ ದಾಖಲು

kadaba times

ಸುಳ್ಯ: ಮನೆ ಹೊರಭಾಗದಲ್ಲಿ ಇರಿಸಿದ್ದ ಚಪ್ಪಲಿಯೊಳಗೆ ಅವಿತುಕೊಂಡಿದ್ದ ಹಾವು ಕಚ್ಚಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಅ.26 ರಂದು  ಸುಳ್ಯದಿಂದ ವರದಿಯಾಗಿದೆ.

kadaba times
uniq

ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಎಂಬವರು ಆಸ್ಪತ್ರೆಗೆ ದಾಖಲಾದ ಮಹಿಳೆ.

ಮುಂಜಾನೆ  ಮನೆಯ ಹೊರ ಭಾಗದಲ್ಲಿ ಇರಿಸಿದ್ದ ಚಪ್ಪಲಿ ಹಾಕಲು ಹೋದಾಗ ಚಪ್ಪಲಿನ ಒಳಗಡೆ ಸೇರಿಕೊಂಡಿದ್ದ ಹಾವು ಇವರ ಕಾಲಿಗೆ ಕಚ್ಚಿದೆ ಎಂದು ಹೇಳಲಾಗುತ್ತಿದೆ.

kadaba times
kadaba times

ಮನೆ ಬಂದಿ ಕೂಡಲೇ  ಅವರನ್ನು  ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ ತಂದಿದ್ದು ಪ್ರಾಥಮಿಕ ಚಿಕಿತ್ಸೆ ಬಳಿಕ ತುರ್ತು ಚಿಕಿತ್ಸೆ ವಿಭಾಗದಲ್ಲಿ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

 

Related Articles

Latest Articles