
ಸುಳ್ಯ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ಆಡಿಂಜ ಎಂಬಲ್ಲಿ ನಡೆದಿದೆ.


ಆಡಿಂಜ ನಿವಾಸಿ ರವಿ ಮೃತಪಟ್ಟ ಯುವಕ . ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರ ವಾಸವಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಕೃತ್ಯವೆಸಗಿಕೊಂಡಿರುವುದಾಗಿ ತಿಳಿದು ಬಂದಿದೆ.


ಸ್ಥಳಕ್ಕೆ ಪೋಲಿಸರು ತೆರಳಿದ್ದು ಮಹಜರು ನಡೆಸಿದ್ದು ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ.
