
ಕಡಬ: ಇಲ್ಲಿನ ಹನುಮಾನ್ ನಗರದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಸ್ವತೀ ವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಶಿವಪ್ರಸಾದ್ ರೈ ಮೈಲೇರಿ ಇವರು ಕಾರ್ಯಕ್ರಮದ ಉದ್ಘಾಟಿಸಿದರು. ಬಳಿಕ ಮಾತನಾಡಿ , ಮಕ್ಕಳು ದೇವರಂತೆ, ಆ ದೇವರಿಗೆ ನಿತ್ಯಪೂಜೆ ಮಾಡುವ ಅರ್ಚಕರು ಶಿಕ್ಷಕರು. ಮಕ್ಕಳ ಮನಸ್ಸನ್ನು ಅರಿತು ಪಾಠ ಮಾಡುವ ಶಿಕ್ಷಕರು ನಿಜವಾಗಿಯೂ ಅಭಿನಂದನಾರ್ಹರು ಎಂದರು. ಸಂಸ್ಕಾರ ಮತ್ತು ಸಂಸ್ಕೃತಿ ಇದ್ದರೆ ಮಾತ್ರ ಒಬ್ಬ ವ್ಯಕ್ತಿ ಉತ್ತಮ ನಾಗರಿಕನಾಗಲು ಸಾಧ್ಯ ಎಂದರು.
ವೇದಿಕೆಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ವಿಭಾಗದ ಆಡಳಿತ ಮಂಡಳಿ ಅಧ್ಯಕ್ಷ ಸದಾಶಿವ ಭಟ್ ಮತ್ತು ಮುಖ್ಯಗುರುಗಳಾದ ವಸಂತ ಕೆ. ಉಪಸ್ಥಿತರಿದ್ದರು .


ಮಕ್ಕಳಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ಬಹುಮಾನಗಳನ್ನು ವಿತರಿಸಲಾಯಿತು. ಬಳಿಕ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಚಂದನ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಸುಮಂಗಲ ವಂದಿಸಿದರು.
