
ಕಡಬ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ 2025 ಇಂದು (ನ.22 ರಂದು) ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.


ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಉಜಿರೆಯ ನಿವೃತ್ತ ಪ್ರಾಂಶುಪಾಲರಾದ ಅಶೋಕ್ ಕುಮಾರ್ ಮೂಲೆಮಜಲು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪ.ಪಂ ಅಧ್ಯಕ್ಷೆ ಶ್ರೀಮತಿ ತಮನ್ನಾ ಜಬೀನ್, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ಶೆಟ್ಟಿ , ಪ.ಪಂ ಸದಸ್ಯ ಕೃಷ್ಣಪ್ಪ ಬೈಲಂಗಡಿ ಭಾಗವಹಿಸಲಿದ್ದಾರೆ.


ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಶ ದಯಾನಂದ ಉಂಡಿಲ ಗೌರವ ಉಪಸ್ಥಿತಿ ಇರಲಿದ್ದಾರೆ.ಮಧ್ಯಾಹ್ನ 2 ಗಂಟೆಯಿಂದ 5 ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
