
ಚಿಕ್ಕಮಗಳೂರು: ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ದುರ್ಘಟನೆಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.


ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಈಕೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್ನಲ್ಲಿ ವಾಸವಾಗಿದ್ದರು.
ಇಂದು ಹಾಸ್ಟೆಲ್ನಲ್ಲಿದ್ದ ವೇಳೆ ಹಠಾತ್ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಸಹಪಾಠಿಗಳು ನೆರವಿಗೆ ಧಾವಿಸಿದರೂ, ಅದಾಗಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.


ಮೃತ ದಿಶಾ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಅಕಾಲಿಕ ಸಾವಿನ ಸುದ್ದಿ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಕುಟುಂಬದವರಲ್ಲಿ ತೀವ್ರ ದುಃಖ ಮತ್ತು ಆಘಾತವನ್ನುಂಟುಮಾಡಿದೆ. ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
