
ಕಡಬ/ಸುಬ್ರಹ್ಮಣ್ಯ: ಗುಂಡ್ಯದಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಉಡುಪಿ ಕಾರ್ಕಳ ನಿವಾಸಿ ಶೋಧನ್ (22) ಬಂಧಿತ ಆರೋಪಿ. ಆರೋಪಿಯನ್ನು ಹಾಸನದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಡಬದ ಶಿರಾಡಿ ನಿವಾಸಿ ಸುರೇಶ್ (46) ಎಂಬವರು ಅಂಬ್ಯುಲೆನ್ಸ್ ಚಾಲಕರಾಗಿದ್ದು, ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ ಲಾಕ್ ಮಾಡಿ ಮನೆಗೆ ಹೋಗುತ್ತಿದ್ದರು. ಡಿ.19 ರಂದು ರಾತ್ರಿ ಕೂಡಾ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ, ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಅಂಬ್ಯಲೆನ್ಸ್ ಕೀಯನ್ನು ಅಂಬ್ಯುಲೆನ್ಸ್ ನಲ್ಲಿ ಇಟ್ಟು ಹೋಗಿದ್ದರು.


ಮರುದಿನ ಬೆಳಿಗ್ಗೆ, ಮನೆಯಿಂದ ಬಂದು ಅಂಬ್ಯುಲೆನ್ಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ, ಅಂಬ್ಯುಲೆನ್ಸ್ ಕಳವಾಗಿದ್ದು ಗೊತ್ತಾಗಿದೆ.ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಡಿ 20 ರಂದು ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ಕಳವಾಗಿದ್ದ ಅಂಬ್ಯುಲೆನ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.
