
ಪ್ರಮುಖ ಸುದ್ದಿ: ನಾಪತ್ತೆಯಾಗಿದ್ದ ಯುವಕನ ಮೃತದೇಹವು ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.


ಬದ್ರುದ್ದೀನ್ ಡಿಕೆ (27) ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಝಿಂದಗೀ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ.
ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ತೆರಳಿದವರು ಕೆಲಸದ ಸ್ಥಳಕ್ಕೂ ಹೋಗದೇ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿತ್ತು.


ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಯುವಕನ ಮೃತದೇಹ ಸೇಡಿಯಾಪು ಸಮೀಪದ ಹನುಮಾಜೆಯ ಗುಡ್ಡದಲ್ಲಿ ಪತ್ತೆಯಾಗಿದೆ.
