ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ

ತುಳುಪರ ಸಂಘಟನೆಗಳಿಂದ ಜಂಟಿ ಸುದ್ದಿಗೋಷ್ಠಿ

kadaba times

ಕಡಬ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನೇತೃತ್ವದಲ್ಲಿ  ನೇತ್ರಾವತಿ ತುಳು ಕೂಟ ರಾಮಕುಂಜ, ನೂಜಿಬಾಳ್ತಿಲ ತೆಗ್‌ರ್ ತುಳು ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ ಕುಟ್ರುಪ್ಪಾಡಿ ಗ್ರಾಮದ ಕೇಪು ಶ್ರೀ ಮಹಾಗಣಪತಿ ಲಕ್ಷ್ಮೀ ಜನಾರ್ದನ ಆಂಜನೇಯ ದೇವಸ್ಥಾನದ ಸಭಾಂಗಣದಲ್ಲಿ ಡಿ. 20 ಹಾಗೂ 21 ರಂದು ನಡೆಯಲಿದೆ. ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

kadaba times
uniq

ಸಮ್ಮೇಳನಾಧ್ಯಕ್ಷರಾಗಿ ಕೆ.ಸೇಸಪ್ಪ ರೈ ರಾಮಕುಂಜ ಆಯ್ಕೆಯಾಗಿದ್ದು ತುಳುನಾಡಿನ ಸಂಸ್ಕೃತಿ ಸಂಪ್ರದಾಯ, ಆಚಾರ ವಿಚಾರಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಹಕ್ಕೊತ್ತಾಯವನ್ನು ಮಂಡಿಸುವ ಉದ್ದೇಶದೊಂದಿಗೆ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದರು.

ತುಳುನಾಡಿನಲ್ಲಿ ಹಸುಹೊಕ್ಕಾಗಿರುವ ವಿವಿಧ ಆಚರಣೆಗಳು ಹಾಡು, ಕುಣಿತ, ಭಜನೆ ಮುಂತಾದ ಸ್ಪರ್ಧೆಗಳನ್ನು ಕಾಣಿಯೂರು, ನೂಜಿಬಾಳ್ತಿಲ, ರಾಮಕುಂಜ, ಸವಣೂರು ಭಾಗಗಳಲ್ಲಿ ನಡೆಸಿ ಡಿ. 20ರಂದು ಸಮ್ಮೇಳನಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಸಂಜೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಹೊರಟು ಕೇಪು ದೇವಸ್ಥಾನದಲ್ಲಿ ಸಮಾಪನಗೊಳ್ಳಲಿದೆ. ಮೆರವಣಿಗೆಯನ್ನು ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬಿನ್‌ ಉದ್ಘಾಟಿಸಲಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಕರ್ಕೆರ ಪುಷ್ಪಾರ್ಚನೆ ಮಾಡಲಿದ್ದಾರೆ. ಭಾನುವಾರ ಬೆಳಿಗ್ಗೆ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಧ್ವಜಾರೋಹಣ ನಡೆಸಲಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ನಾಡಧ್ವಜಾರೋಹಣ ಮಾಡಲಿದ್ದಾರೆ. ಸಮ್ಮೇಳನಾಧ್ಯಕ್ಷ ಕೆ.ಸೇಸಪ್ಪ ರೈ ತುಳು ಧ್ವಜಾರೋಹಣ ಮಾಡಲಿದ್ದಾರೆ.

ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೆಂದ್ರ ಹೆಗ್ಗಡೆಯವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮೂಡಬಿದ್ರೆ ಆಳ್ವಾಸ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್‌ ಆಳ್ವ, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ರಾಜ್ಯ ತುಳು ಸಾಹಿತ್ಯ ಅಕಾಡೆಮಿಯ ಅಧ್ಯ ಕ್ಷತಾರಾನಾಥ ಗಟ್ಟಿ  , ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಅಶೋಕ್ ಕುಮಾರ್ ಬೊಟ್ಯಾಡಿ, ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

kadaba times
kadaba times

ವಸ್ತು ಪ್ರದರ್ಶನ, ವಿಚಾರಗೋಷ್ಠಿ: ತುಳನಾಡ ದಿನ ಬಳಕೆಯ ಹಳೆಯ ವಸ್ತು ಪ್ರದರ್ಶನ ನಡೆಯಲಿದೆ. ಶಾಲೆಗಳಲ್ಲಿ ತುಳುಕಲಿಕೆಗೆ ಸಮ್ಮೇಳನದ ಪಾತ್ರ, ತುಳು ಬೆಳವಣಿಗೆಯಲ್ಲಿ ಸಂಘ ಸಂಸ್ಥೆಗಳ ಪಾತ್ರ, ತುಳು ಕಲಿಸುತ್ತಿರುವ ಶಾಲೆಗಳನ್ನು ಹೇಗೆ ಹೆಚ್ಚಿಸಬಹುದು ಎನ್ನುವ ವಿಚಾರಗಳ ಬಗ್ಗೆ ವಿಚಾರಗೋಷ್ಠಿ, ಸರಿತಾ ಜನಾರ್ದನ್ ಬರೆದಿರುವ ಪುಸ್ತಕ ಬಿಡುಗಡೆ, ಕವಿತೆ ಹಾಗೂ ಕಥಾ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಮ್ಮೇನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ ನಡೆದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಪುತ್ತೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ| ಮಕಾರಿಯೋಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ದುರ್ಗಾಪ್ರಸಾದ್ ರೈ ಕುಂಬ್ರ ಸಮಾರೋಪ ಭಾಷಣ ಮಾಡಲಿದ್ದಾರೆ, ವಿವಿಧ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವರಾಮ ಶೆಟ್ಟಿ ತಿಳಿಸಿದರು.

ಸಮ್ಮೇಳದ ಸ್ವಾಗತ ಸಮಿತಿಯ ಉಪಾಧ್ಯಕ್ಷ ಜಯಸೂರ್ಯ ರೈ ಮಾದೋಡಿ, ಕಾರ್ಯದರ್ಶಿ ಸರಿತಾ ಜನಾರ್ದನ್ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಮಿತಿ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ., ಜತೆ ಕಾರ್ಯದರ್ಶಿ ಪ್ರೇಮಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related Articles

Latest Articles