
ನೊಂದ ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದವರು ಹಿಂತಿರುಗಿ ಬಂದಾಗ ಆರೋಪಿಯು ನಿರಂತರವಾಗಿ ಅತ್ಯಾಚಾರ ಮಾಡಿರುವುದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ. ಕ್ರ 118/2025, ಕಲಂ: 115(2),351(2),65(1) BNS-2023 4,6 ಪೋಕ್ಸೋ ಕಾಯ್ದೆ 2012 ಪ್ರಕರಣ ದಾಖಲಾಗಿದೆ.


ಉಪ್ಪಿನಂಗಡಿ: ಜೇನು ಕೃಷಿ ಕಲಿಸುತ್ತೇನೆಂದು ಹೇಳಿ ಅಪ್ರಾಪ್ತೆಯನ್ನು ನಿರಂತರ ಲೈಂಗಿಕ ತೃಷೆಗೆ ಬಳಸಿಕೊಂಡ ವ್ಯಕ್ತಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.
ಉಪ್ಪಿನಂಗಡಿಯ ಅಬ್ದುಲ್ ಗಪೂರ್ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ
ಬೆಳಗಾವಿ ಮೂಲದ ಕುಟುಂಬ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದರು . ಅಪ್ರಾಪ್ತ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ ಕಾರಣ ತನ್ನ ಮಗಳನ್ನು 2 ತಿಂಗಳಿಂದ ಆರೋಪಿಯ ಮನೆಯಲ್ಲಿ ಬಿಟ್ಟಿದ್ದರು ಎನ್ನಲಾಗಿದೆ.


ನೊಂದ ಬಾಲಕಿಯ ಹೆತ್ತವರು ಊರಿಗೆ ತೆರಳಿದ್ದವರು ಹಿಂತಿರುಗಿ ಬಂದಾಗ ಆರೋಪಿಯು ಬಾಲಕಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿರುವುದಾಗಿ ನೊಂದ ಬಾಲಕಿ ತಿಳಿಸಿರುತ್ತಾಳೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ. ಕ್ರ 118/2025, ಕಲಂ: 115(2),351(2),65(1) BNS-2023 4,6 ಪೋಕ್ಸೋ ಕಾಯ್ದೆ 2012 ಪ್ರಕರಣ ದಾಖಲಾಗಿದೆ.
ತನಿಖೆ ನಡೆಸಲಾಗುತ್ತಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿರುತ್ತದೆ. ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
