
ಪ್ರಮುಖ ಸುದ್ದಿ: ಯಾರೋ ಕಳ್ಳರು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ, ವಾಹನ ರಸ್ತೆಯಲ್ಲಿ ಕೆಟ್ಟುಹೋಗಿರುವುದರಿಂದ, ವಾಹನದಲ್ಲಿದ್ದ ಗೋವುಗಳನ್ನು ಪುತ್ತೂರು, ನರಿಮೊಗರು ಎಂಬಲ್ಲಿ ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದರು.


ಸ್ಥಳೀಯರ ಸಹಕಾರದಿಂದ ಪ್ರೇಮ್ರಾಜ್ ಎಂಬವರು ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿದ್ದರು. ಗೋವುಗಳನ್ನು ಯಾರೋ ಕಳ್ಳರು ಕದ್ದು ತಂದಿರಬಹುದೆಂದು ಸಂಶಯವಿದ್ದು, ಕೃತ್ಯವೆಸಗಿದ ಆರೋಪಿಗಳನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ದೂರು ನೀಡಲಾಗಿತ್ತು.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2025, ಕಲಂ: 4, 5 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ ಮತ್ತು ಕಲಂ: 303(1) BNS 2023 ಮತ್ತು 106 BNSS -2023 ರಂತೆ ಪ್ರಕರಣ ದಾಖಲಾಗಿತ್ತು.


ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಎಂಬವರುಗಳು ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುವ ವೇಳೆ ವಾಹನ ದುರಸ್ತಿಗೀಡಾದ್ದರಿಂದ, ಆರೋಪಿಗಳು ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿರುವುದು ತಿಳಿದುಬಂದಿರುತ್ತದೆ.
ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
