
ಕರ್ನಾಟಕ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ–48ರಲ್ಲಿ ಲಾರಿ ಮತ್ತು ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.


ಲಾರಿಯೊಂದು ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.


