ಅಂಗಡಿಗೆ ತಿಂಡಿ ತರಲು ಹೋಗಿ ವಾಪಾಸ್ಸು ಬರುತ್ತಿದ್ದ ವೇಳೆ ದುರ್ಘಟನೆ: ಮೂರು ವರ್ಷದ ಮಗು ಮೃತ್ಯು

kadaba times

ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ಸಂಭವಿಸಿದೆ.

kadaba times
uniq

ಮೃತ ಬಾಲಕನನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಪುತ್ರ ಮುಹಮ್ಮದ್ ಹಝೀರಿನ್ ಎಂದು ಗುರುತಿಸಲಾಗಿದೆ.

ಮೃತ ಬಾಲಕ ತನ್ನ ಮನೆಯ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿ, ಹಿಂದಿರುಗುವಾಗ ರಸ್ತೆ ದಾಟಲು ಪ್ರಯತ್ನಿಸುವ ವೇಳೆ ಕಾರು ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

kadaba times
kadaba times

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Latest Articles