ಆಲಂಕಾರು: ಓವರ್‌ಟೇಕ್ ಮಾಡುವ ಭರದಲ್ಲಿ ಕಾರು-ಬೈಕ್ ಅಪಘಾತ; ಮೆಸ್ಕಾಂ ಉದ್ಯೋಗಿಗೆ ಗಂಭೀರ ಗಾಯ.

kadaba times

ಆಲಂಕಾರು ಪೆರಾಬೆ ಗ್ರಾಮದ ಕೋಚಕಟ್ಟೆ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೆಸ್ಕಾಂ ಉದ್ಯೋಗಿ ದಯಾನಂದ್ ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

kadaba times
uniq

ಆಲಂಕಾರು: ಪೆರಾಬೆ ಗ್ರಾಮದ ಕೋಚಕಟ್ಟೆ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ವಿವರ: ಹೊಸ್ಮಠ ದೇರಾಜೆ ನಿವಾಸಿ, ಮೆಸ್ಕಾಂ ಉದ್ಯೋಗಿ ದಯಾನಂದ ಗಾಯಗೊಂಡವರು. ಇವರು ತಮ್ಮ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಮುಂದಿದ್ದ ವಾಹನವನ್ನು ಹಿಂದಿಕ್ಕುವ (Overtake) ಗಡಿಬಿಡಿಯಲ್ಲಿ ಎದುರಿನಿಂದ ಬರುತ್ತಿದ್ದ ದಯಾನಂದ ಅವರ ಬೈಕ್‌ಗೆ ನೇರವಾಗಿ ಢಿಕ್ಕಿ ಹೊಡೆದಿದೆ.

kadaba times
kadaba times

ಢಿಕ್ಕಿಯ ರಭಸ ಎಷ್ಟಿತ್ತೆಂದರೆ, ಕಾರು ಬೈಕನ್ನು ಕೆಲವು ಮೀಟರ್‌ಗಳಷ್ಟು ದೂರದವರೆಗೆ ಎಳೆದುಕೊಂಡು ಹೋಗಿದೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಯಾನಂದ ಅವರನ್ನು ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Latest Articles