ದಕ್ಷಿಣ ಕನ್ನಡ: ಶಬರಿಮಲೆ ಯಾತ್ರೆ ವೇಳೆ ಅಯ್ಯಪ್ಪ ಮಾಲಾ ವೃತಧಾರಿ ಹೃದಯಾಘಾತದಿಂದ ನಿಧನ

kadaba times

ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲದ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಅವರು ಕೇರಳದ ಎರಿಮಲೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಮಧ್ಯಸ್ಥಿಕೆಯಲ್ಲಿ ನಾಳೆ ಪಾರ್ಥಿವ ಶರೀರ ಉಳ್ಳಾಲಕ್ಕೆ ಆಗಮಿಸಲಿದೆ

kadaba times
uniq

ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೊಬ್ಬರು ಕೇರಳದ ಎರಿಮಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ, ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತಪಟ್ಟ ದುರ್ದೈವಿ.

ಘಟನೆಯ ವಿವರ: ಚಂದ್ರಹಾಸ್ ಶೆಟ್ಟಿ ಅವರು ಇತರ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆಯಲ್ಲಿ ಶನಿವಾರದಂದು ನಗರದ ಅರ್ಕುಳ ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಆರಂಭಿಸಿದ್ದರು. ಸೋಮವಾರ ಬೆಳಿಗ್ಗೆ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಯತ್ತ ಪ್ರಯಾಣ ಬೆಳೆಸುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಗಮನಿಸಿದರೂ, ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

kadaba times
kadaba times

ಸ್ಪೀಕರ್ ಯು.ಟಿ. ಖಾದರ್ ಸಹಕಾರ: ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಮೃತದೇಹವನ್ನು ಉಳ್ಳಾಲಕ್ಕೆ ತರಲು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಮಂಗಳವಾರ ಬೆಳಿಗ್ಗೆ ಪಾರ್ಥಿವ ಶರೀರವು ಉಳ್ಳಾಲ ತಲುಪುವ ನಿರೀಕ್ಷೆಯಿದೆ.

ಪರಿಚಯ: ಮೂಲತಃ ಬಾಕ್ರಬೈಲ್ ನಿವಾಸಿಯಾಗಿದ್ದ ಚಂದ್ರಹಾಸ್ ಅವರು ಕಳೆದ ಹತ್ತು ವರ್ಷಗಳಿಂದ ಪಿಲಾರಿನಲ್ಲಿ ಮನೆ ನಿರ್ಮಿಸಿ ವಾಸವಾಗಿದ್ದರು. ಅವರು ಮಿನರಲ್ ವಾಟರ್ ಪೂರೈಕೆಯ ಉದ್ಯಮವನ್ನು ನಡೆಸುತ್ತಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related Articles

Latest Articles