ಕಡಬ: ಮದುವೆಯಾಗದ ಚಿಂತೆಯಲ್ಲಿ ವಿಷ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

kadaba times

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಮೋನಪ್ಪ (33) ಎಂಬುವವರು ಮದುವೆಯಾಗದ ಬೇಸರದಲ್ಲಿ ವಿಷ ಸೇವಿಸಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಅವರು ಜನವರಿ 24 ರಂದು ಮೃತಪಟ್ಟಿದ್ದಾರೆ.

kadaba times
uniq

ಕಡಬ: ಮದುವೆಯಾಗುತ್ತಿಲ್ಲ ಎಂಬ ಚಿಂತೆಯಿಂದ ಮನನೊಂದು ವಿಷ ಸೇವಿಸಿದ್ದ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಯುವಕನೋರ್ವ   ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತ  ಮೋನಪ್ಪ (33) ಅವರು   ದೋಳ್ಪಾಡಿ ಗ್ರಾಮದ ಅಜ್ಜಿನಡ್ಕದಲ್ಲಿ ತಾಯಿ, ಸಹೋದರರು ಹಾಗೂ ಕುಟುಂಬದೊಂದಿಗೆ ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಮೋನಪ್ಪ ಅವರಿಗೆ 33 ವರ್ಷ ವಯಸ್ಸಾದರೂ ಸಂಬಂಧ ಕೂಡಿ ಬರುತ್ತಿರಲಿಲ್ಲ. ಇದರಿಂದಾಗಿ ಅವರು ತೀವ್ರವಾಗಿ ಬೇಸರಗೊಂಡಿದ್ದರು ಎನ್ನಲಾಗಿದೆ.

ಇದೇ ವಿಚಾರವಾಗಿ ದಿನಾಂಕ 18-01-2026 ರಂದು ಸಂಜೆ 4:30ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮೋನಪ್ಪ ವಿಷ ಪದಾರ್ಥ ಸೇವಿಸಿದ್ದರು. ತಾಯಿ  ಮನೆಗೆ ಬಂದಾಗ ಮಗ ಅಸ್ವಸ್ಥಗೊಂಡಿರುವುದು ಕಂಡುಬಂದಿದೆ. ಕೂಡಲೇ ನೆರೆಹೊರೆಯವರ ಸಹಾಯದಿಂದ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

kadaba times
kadaba times

ಹೆಚ್ಚಿನ ಚಿಕಿತ್ಸೆಗಾಗಿ ಮೋನಪ್ಪ ಅವರನ್ನು ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ದಿನಾಂಕ 24-01-2026 ರಂದು ಸಂಜೆ 5:06 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮೃತರ ಸಹೋದರ ಚೆನ್ನಪ್ಪ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂಬ್ರ 03/2026 ಕಲಂ: 194 BNSS-2023 ರಂತೆ ಪ್ರಕರಣ ದಾಖಲಾಗಿದೆ.

Related Articles

Latest Articles