ಕುಕ್ಕೆ ಸುಬ್ರಹ್ಮಣ್ಯ : 4 ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರ ದರ್ಶನ

ಹುಂಡಿ, ಸೇವೆ, ಅನ್ನದಾನದಿಂದ ದಾಖಲೆ ಆದಾಯ

kadaba times

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಳೆದ 4 ದಿನಗಳಲ್ಲಿ 2 ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿದ್ದು, ಕ್ಷೇತ್ರದ ಆದಾಯ 4 ಕೋಟಿ ದಾಟುವ ಸಾಧ್ಯತೆಯಿದೆ. ಭಕ್ತರ ಅನುಕೂಲಕ್ಕೆ ವಿಶೇಷ ದರ್ಶನ ಹಾಗೂ ಅನ್ನಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

kadaba times
uniq

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕಳೆದ ನಾಲ್ಕು ದಿನಗಳಿಂದ ಭಕ್ತಾದಿಗಳ ಮಹಾಪೂರವೇ ಹರಿದುಬಂದಿದೆ. ಸರಣಿ ರಜೆಗಳ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ಹೊರರಾಜ್ಯಗಳಿಂದಲೂ ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಹಗಲು-ರಾತ್ರಿ ಎನ್ನದೇ ಸುಮಾರು ಎರಡು ಲಕ್ಷಕ್ಕೂ ಅಧಿಕ ಜನರು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.

ಭಕ್ತರ ಈ ಭಾರಿ ಸಂಖ್ಯೆಯ ಆಗಮನದಿಂದಾಗಿ ಶ್ರೀ ಕ್ಷೇತ್ರದ ಆದಾಯದಲ್ಲೂ ದಾಖಲೆಯ ಏರಿಕೆ ಕಂಡುಬಂದಿದೆ. ಕಳೆದ ನಾಲ್ಕು ದಿನಗಳ ಅವಧಿಯಲ್ಲಿ ಹುಂಡಿ ಕಾಣಿಕೆ, ವಿವಿಧ ಸೇವೆಗಳ ರಸೀದಿ, ಅನ್ನದಾನ ದೇಣಿಗೆ, ವಸತಿ ಛತ್ರಗಳ ಬಾಡಿಗೆ ಹಾಗೂ ಭಕ್ತರು ಹರಿಕೆಯ ರೂಪದಲ್ಲಿ ಅರ್ಪಿಸಿದ ಚಿನ್ನ ಮತ್ತು ಬೆಳ್ಳಿಯ ದೇಣಿಗೆಗಳನ್ನು ಒಳಗೊಂಡಂತೆ ಕ್ಷೇತ್ರದ ಒಟ್ಟು ಆದಾಯ ನಾಲ್ಕು ಕೋಟಿ ರೂಪಾಯಿ ದಾಟುವ ನಿರೀಕ್ಷೆಯಿದೆ ಎಂದು ದೇವಳದ ಮೂಲಗಳು ತಿಳಿಸಿವೆ.

kadaba times
kadaba times

ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ದೇವಳದ ಆಡಳಿತ ಮಂಡಳಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಿತ್ತು. ಮುಖ್ಯ ಅನ್ನಪ್ರಸಾದ ಭೋಜನ ಶಾಲೆಯ ಜೊತೆಗೆ ಹೆಚ್ಚುವರಿಯಾಗಿ ಆದಿ ಸುಬ್ರಹ್ಮಣ್ಯದ ಭೋಜನ ಶಾಲೆಯಲ್ಲಿಯೂ ಬಫೆ ವ್ಯವಸ್ಥೆಯ ಮೂಲಕ ಅನ್ನಪ್ರಸಾದ ವಿತರಣೆ ಮಾಡಲಾಯಿತು. ವಾಹನ ದಟ್ಟಣೆಯನ್ನು ನಿಯಂತ್ರಿಸಲು ರಥಬೀದಿ ಹಾಗೂ ಪಾರ್ಕಿಂಗ್ ಪ್ರದೇಶಗಳಲ್ಲಿ ಪೊಲೀಸ್ ಮತ್ತು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಕ್ಷೇತ್ರದ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಒಳಾಂಗಣದಲ್ಲಿ ಭಕ್ತರ ದರ್ಶನ ವ್ಯವಸ್ಥೆಯ ಮೇಲ್ವಿಚಾರಣೆ ನಡೆಸಿದರೆ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಯೇಸುರಾಜ್ ಅವರು ಹೊರಭಾಗದ ಸಾಲು ವ್ಯವಸ್ಥೆ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಸಂಘಟಿಸುವ ಮೂಲಕ ಭಕ್ತರಿಗೆ ಸುಲಭವಾಗಿ ದೇವರ ದರ್ಶನ ಸಿಗುವಂತೆ ಶ್ರಮಿಸಿದರು

Related Articles

Latest Articles