Road accident| ಪೆರಿಯಶಾಂತಿ ಬಳಿ ಬೈಕ್ ಪಲ್ಟಿಯಾಗಿ ಸವಾರ ಸ್ಥಳದಲ್ಲೇ ಸಾವು

kadaba times

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರಿಯಶಾಂತಿ ಬಳಿ ಬೈಕ್ ಸ್ಕಿಡ್ ಆಗಿ ಶಿರಾಡಿ ನಿವಾಸಿ ಜಾಯ್ ಎಂಬುವವರು ಸಾವನ್ನಪ್ಪಿದ್ದಾರೆ. ಹೆದ್ದಾರಿ ಕಾಮಗಾರಿಯ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.

kadaba times
uniq

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕ ಸಮೀಪ ಇಂದು (ಜ. 23) ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ವಿವರ: ಶಿರಾಡಿ ಗ್ರಾಮದ ಮಿತ್ತಮಜಲು ನಿವಾಸಿ ಜಾಯ್ (51 ವರ್ಷ) ಮೃತಪಟ್ಟ ದುರ್ದೈವಿ. ಇವರು ತಮ್ಮ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಪೆರಿಯಶಾಂತಿ ಬಳಿಯ  ಲಾವತ್ತಡ್ಕ ಎಂಬಲ್ಲಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ. ಅಪಘಾತದ ತೀವ್ರತೆಗೆ ಬೈಕ್ ಪಲ್ಟಿಯಾಗಿದ್ದು, ಜಾಯ್ ಅವರು ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

kadaba times
kadaba times

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು.

Related Articles

Latest Articles